ಬೀದರ್ ಜನಿವಾರ ಪ್ರಕರಣ: ಪ್ರಾಂಶುಪಾಲ, ದ್ವಿ.ದ. ಸಹಾಯಕ ಕೆಲಸದಿಂದ ವಜಾ


ಬೀದರ್ : ನಗರದ ಸಾಯಿ ಸ್ಫೂರ್ತಿ ಪದವಿ ಪೂರ್ವ ಕಾಲೇಜಿನಲ್ಲಿ ಸುಚಿವ್ರತ್‌ಗೆ ಜನಿವಾರ ತೆಗೆಯಲು ಒತ್ತಾಯಿಸಿ ಪರೀಕ್ಷೆ ಬರೆಯಲು ಅವಕಾಶ ನೀಡದೆ ವಿದ್ಯಾರ್ಥಿಯ ಶೈಕ್ಷಣಿಕ ಭವಿಷ್ಯವನ್ನು ಗಣನೆಗೆ ತೆಗೆದುಕೊಳ್ಳದೆ ಕರ್ತವ್ಯ ಲೋಪ ಎಸಗಿದ್ದ ಕಾಲೇಜಿನ ಪ್ರಾಂಶುಪಾಲ ಮತ್ತು ದ್ವಿತೀಯ ದರ್ಜೆ ಸಹಾಯಕರನ್ನು ಕೆಲಸದಿಂದ ವಜಾ ಮಾಡಲಾಗಿದೆ.
ಸದರಿ ಪ್ರಕರಣವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿತ್ತು. ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಅವರು, ಪ್ರಕರಣದ ಬಗ್ಗೆ ಉಪ ವಿಭಾಗಾಧಿಕಾರಿ ದರ್ಜೆಯ ಅಧಿಕಾರಿಯಿಂದ ತನಿಖೆ ನಡೆಸಿ ೨೪ ಗಂಟೆಯೊಳಗೆ ವರದಿ ಸಲ್ಲಿಸುವಂತೆ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ್ದರು.
ಜನಿವಾರ ತೆಗೆಸುವಂತೆ ನಿಯಮದಲ್ಲಿ ಇಲ್ಲದಿದ್ದರೂ ಸುಚಿವ್ರತ್ ಕುಲಕರ್ಣಿ ಎಂಬ ವಿದ್ಯಾರ್ಥಿಗೆ ೧೭ರಂದು ಜನಿವಾರ ತೆಗೆಯುವಂತೆ ಒತ್ತಾಯಿಸಿ, ಆತ ಒಪ್ಪದಿದ್ದಾಗ ಕೆ-ಸಿಇಟಿ ಗಣಿತ ವಿಷಯದ ಪರೀಕ್ಷೆ ಬರೆಯಲು ಅವಕಾಶ ನೀಡದೆ ಮನೆಗೆ ಕಳುಹಿಸಿರುವುದು ಗಂಭೀರ ಸ್ವರೂಪದ ಅಪರಾಧವಾಗಿದ್ದು, ಇದಕ್ಕೆ ಕಾರಣರಾದ ಕಾಲೇಜಿನ ಪ್ರಾಂಶುಪಾಲ ಹಾಗೂ ಪರೀಕ್ಷಾ ಕೇಂದ್ರದ ಉಪ ಮುಖ್ಯ ಅಧೀಕ್ಷಕ ಚಂದ್ರಶೇಖರ ಬಿರಾದಾರ ಹಾಗೂ ಪ್ರಿಸ್ಕಿಂಗ್ ಸಿಬ್ಬಂದಿ ದ್ವಿತೀಯ ದರ್ಜೆ ಸಹಾಯಕ ಸತೀಶ್ ಪವಾರ್ ಅವರನ್ನು ತತ್ ಕ್ಷಣದಿಂದ ಜಾರಿಗೆ ಬರುವಂತೆ ಕೆಲಸದಿಂದ-ಸೇವೆಯಿAದ ವಜಾಗೊಳಿಸಿ ಸಾಯಿ ಸ್ಫೂರ್ತಿ ಪದವಿ ಪೂರ್ವ ಕಾಲೇಜು ಆಡಳಿತ ಮಂಡಳಿ ಆದೇಶ ಹೊರಡಿಸಿದೆ.