ವಿಜಯಪುರ: ಕಳೆದ ತಿಂಗಳು ವಿಜಯಪುರ ಜಿಲ್ಲೆಯ ಮನಗೂಳಿ ಪಟ್ಟಣದಲ್ಲಿ ನಡೆದ ಕೆನರಾ ಬ್ಯಾಂಕ್ ದರೋಡೆ ಪ್ರಕರಣ, ರಾಜ್ಯದ ಇತಿಹಾಸದಲ್ಲಿಯೇ ಅತಿದೊಡ್ಡ ಡಕಾಯಿತಿ ಪ್ರಕರಣವಾಗಿ, ಸಾರ್ವಜನಿಕರಲ್ಲಿ ಆತಂಕ ಮೂಡಿಸಿತ್ತು, ಆದರೆ, ವಿಜಯಪುರ ಜಿಲ್ಲೆಯ ಪೋಲಿಸ್ ಅಧಿಕಾರಿಗಳು ತಮ್ಮ ಚುರುಕಿನ ಕಾರ್ಯಾಚರಣೆಯಿಂದ ರಾಜ್ಯದ ಜನತೆಯ ನಂಬಿಕೆಗೆ ಧಕ್ಕೆಯುಂಟಾಗದಂತೆ ಮಾಡಿದ್ದಾರೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವ ಎಂಬಿ ಪಾಟೀಲ್ ಹೇಳಿದ್ದಾರೆ.
ಈ ಕುರಿತಂತೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿ ಪ್ರಕರಣವನ್ನು ತಿಂಗಳ ಅವಧಿಯಲ್ಲಿಯೇ ಬೇಧಿಸಿ. ಸೀನಿಯರ್ ಮ್ಯಾನೇಜರ್ ಸೇರಿದಂತೆ ಮೂರು ಆರೋಪಿಗಳನ್ನು ಬಂಧಿಸಿ, ಸುಮಾರು 10.5 ಕೆಜಿ ಚಿನ್ನಾಭರಣ ಹಾಗೂ ಇತರ ವಸ್ತುಗಳನ್ನು ವಶಪಡಿಸಿಕೊಂಡು ಪ್ರಕರಣದಲ್ಲಿ ಪ್ರಮುಖ ಮುನ್ನಡೆ ಸಾಧಿಸಿದ್ದಾರೆ, ಸಾರ್ವಜನಿಕರ ನಂಬಿಕೆಯನ್ನು ಉಳಿಸಿಕೊಳ್ಳುವಲ್ಲಿ ಇಂಥ ಕಾರ್ಯಾಚರಣೆಗಳು ಮಾದರಿಯಾಗಲಿದೆ. ಎಂದಿದ್ದಾರೆ.
ಇನ್ನು ಈ ಕಾರ್ಯಾಚರಣೆ ಯಶಸ್ವಿಗೊಳಿಸಲು ಹಗಲು ರಾತ್ರಿ ಎನ್ನದೆ ಶ್ರಮಿಸಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ ಅವರನ್ನು ವಿಜಯಪುರದ ನಮ್ಮ ನಿವಾಸದಲ್ಲಿ ಪುಸ್ತಕದ ಕಾಣಿಕೆ ನೀಡಿ, ಅವರಿಗೂ ಹಾಗೂ ತಂಡದಲ್ಲಿ ಕಾರ್ಯ ನಿರ್ವಹಿಸಿದ ಎಲ್ಲ ಪೊಲೀಸರಿಗೂ ಅಭಿನಂದನೆ ತಿಳಿಸಿದ್ದಾರೆ.