ಭಯೋತ್ಪಾದಕ ದಾಳಿಗಳ ಮಾಸ್ಟರ್‌ ಮೈಂಡ್‌ ​ಸೈಫುಲ್ಲಾ ಖಾಲಿದ್‌ ಹತ್ಯೆ

ಇಸ್ಲಾಮಾಬಾದ್‌: ಭಾರತದಲ್ಲಿ ನಡೆದ ಹಲವು ಪ್ರಮುಖ ಭಯೋತ್ಪಾದಕ ದಾಳಿಗಳ ಮಾಸ್ಟರ್‌ ಮೈಂಡ್‌, ಲಷ್ಕರ್-ಎ-ತೊಯ್ಬಾ ಉಗ್ರ ಸಂಘಟನೆಯ ಕಮಾಂಡರ್ ​ಸೈಫುಲ್ಲಾ ಖಾಲಿದ್‌ನನ್ನು ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ ಗುಂಡಿಕ್ಕಿ ಹತ್ಯೆ ಮಾಡಲಾಗಿದೆ.
ಸಿಂಧ್ ಪ್ರಾಂತ್ಯದ ಬಾದಿನ್ ಜಿಲ್ಲೆಯ ಮಟ್ಲಿ ತಾಲೂಕಿನಲ್ಲಿ ಅಪರಿಚಿತ ಗುಂಪೊಂದು ಆತನ ಮೇಲೆ ದಾಳಿ ನಡೆಸಿ ಕೊಂದು ಹಾಕಿದೆ ಎನ್ನಲಾಗಿದೆ. 2001ರ ಉತ್ತರ ಪ್ರದೇಶದ ರಾಂಪುರ ಸಿಆರ್‌ಪಿಎಫ್ ಶಿಬಿರದ ಮೇಲಿನ ದಾಳಿ, 2005ರ ಬೆಂಗಳೂರಿನ ಇಂಡಿಯನ್‌ ಇನ್‌ಸ್ಟಿಟ್ಯೂಟ್‌ ಆಫ್‌ ಸೈನ್ಸ್‌ ಮೇಲಿನ ದಾಳಿ ಮತ್ತು 2006ರ ನಾಗ್ಪುರದಲ್ಲಿರುವ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಪ್ರಧಾನ ಕಚೇರಿಯ ಮೇಲಿನ ದಾಳಿಯನ್ನು ಈತನ ಕೈವಾಡವಿತ್ತು ಎನ್ನಲಾಗಿದೆ.