ರಾಯಚೂರು: ಮಂತ್ರಾಲಯದ ಶ್ರೀರಾಘವೇಂದ್ರ ಸ್ವಾಮಿಗಳ ಮಠಕ್ಕೆ ಭಾನುವಾರ ಎರಡು ಲಕ್ಷಕ್ಕೂ ಅಧಿಕ ಪ್ರಮಾಣದಲ್ಲಿ ಭಕ್ತರು ಶ್ರೀರಾಘವೇಂದ್ರ ಸ್ವಾಮಿಗಳವರ ಮೂಲ ಬೃಂದಾವನ ದರ್ಶನಕ್ಕೆ ಆಗಮಿಸಿದ್ದಾರೆ ಎಂದು ಶ್ರೀಮಠದ ಮೂಲಗಳು ತಿಳಿಸಿವೆ.
ಹೆಚ್ಚಿನ ಪ್ರಮಾಣದಲ್ಲಿ ಏಕಕಾಲಕ್ಕೆ ಭಕ್ತರು ಆಗಮಿಸಿದ್ದರೂ ಶ್ರೀಮಠವು ಭಕ್ತರಿಗೆ ಶ್ರೀರಾಯರ ಮೂಲಬೃಂದಾವನದ ದರ್ಶನ ಹಾಗೂ ಪ್ರಸಾದದ ವ್ಯವಸ್ಥೆಯನ್ನು ಮಾಡಲಾಗಿದ್ದು, ಯಾವುದೇ ರೀತಿಯಲ್ಲಿ ಸಮಸ್ಯೆಯಾಗದಂತೆ ಶ್ರೀಮಠವು ಅಗತ್ಯ ಕ್ರಮಗಳನ್ನು ತೆಗೆದುಕೊಂಡಿದೆ ಎಂದು ಶ್ರೀಮಠದ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.