ಮನಮೋಹನ್‌ ಸಿಂಗ್‌ರನ್ನು ಶ್ಲಾಘಿಸಿದ ಪ್ರಧಾನಿ ಮೋದಿ

Advertisement

ನವದೆಹಲಿ: ಮಾಜಿ ಪ್ರಧಾನಿ ಡಾ.ಮನಮೋಹನ್‌ ಸಿಂಗ್‌ ಅವರು ಸುದೀರ್ಘವಾಗಿ ದೇಶಕ್ಕೆ, ಸದನಕ್ಕೆ ನೀಡಿದ ಕೊಡುಗೆ ಅಪಾರವಾದುದು. ಅವರು ವ್ಹೀಲ್​ಚೇರ್​ನಲ್ಲಿ ಕುಳಿತು ಕೂಡ ಕೆಲಸ ಮಾಡಿದ್ದಾರೆ ಎಂದು ಸಿಂಗ್ ಅವರ ಕೊಡುಗೆಯನ್ನು ಪ್ರಧಾನಿ ನರೇಂದ್ರ ಮೋದಿ ಶ್ಲಾಘಿಸಿದ್ದಾರೆ.
ಸದನದಲ್ಲಿ ಯಾವುದೇ ನಾಯಕರ ಕೊಡುಗೆ ಚರ್ಚೆಯಾಗಲಿ. ಆಗೆಲ್ಲಾ ನಾವು ಡಾ.ಮನಮೋಹನ್‌ ಸಿಂಗ್‌ ಅವರ ಕೊಡುಗೆಯನ್ನು ಕೂಡ ಸ್ಮರಿಸಬೇಕು. ರಾಜ್ಯಸಭೆಯಲ್ಲಿರುವ ಸದಸ್ಯರು, ಮುಂದೆ ಆಗಮಿಸುವ ಸದಸ್ಯರು ಮನಮೋಹನ್‌ ಸಿಂಗ್‌ ಅವರ ಆದರ್ಶ, ಮಾರ್ಗದರ್ಶನವನ್ನು ಪಾಲಿಸಬೇಕು. ಇವರೆಲ್ಲರಿಗೂ ಮನಮೋಹನ್‌ ಸಿಂಗ್‌ ಅವರು ಮಾರ್ಗಸೂಚಿಯಾಗಿದ್ದಾರೆ ಎಂದರು.
ರಾಜ್ಯಸಭೆಯ ನಿವೃತ್ತ ಸದಸ್ಯರ ಬೀಳ್ಕೊಡುಗೆ ಸಂದರ್ಭದಲ್ಲಿ ಸದನವನ್ನುದ್ದೇಶಿಸಿ ಮಾಡಿದ ಭಾಷಣದಲ್ಲಿ ಮೋದಿ ಈ ವಿಷಯ ಉಲ್ಲೇಖ ಮಾಡಿದ್ದಾರೆ. ಸದನದಲ್ಲಿ ಮತದಾನದ ವೇಳೆ ಆಡಳಿತ ಪಕ್ಷವೇ ಗೆಲ್ಲುತ್ತದೆ ಎಂದು ಗೊತ್ತಿದ್ದರೂ ಡಾ.ಮನಮೋಹನ್ ಸಿಂಗ್ ಗಾಲಿಕುರ್ಚಿಯಲ್ಲಿ ಬಂದು ಮತ ಚಲಾಯಿಸಿದ್ದು ನನಗೆ ನೆನಪಿದೆ. ಅವರು ಯಾರಿಗೆ ಅಧಿಕಾರ ಕೊಡಲು ಬಂದಿದ್ದರು ಎಂಬುದು ಪ್ರಶ್ನೆಯಲ್ಲ. ಅವರು ಪ್ರಜಾಪ್ರಭುತ್ವಕ್ಕೆ ಶಕ್ತಿ ನೀಡಲು ಬಂದಿದ್ದರು ಎಂದು ನಾನು ನಂಬುತ್ತೇನೆ ಎಂದಿದ್ದಾರೆ.

ಡಾ.ಮನಮೋಹನ್‌ ಸಿಂಗ್‌ ಅವರ ಅವಧಿಯು ಏಪ್ರಿಲ್‌ನಲ್ಲಿ ಮುಗಿಯಲಿದೆ. ಈಗಾಗಲೇ ಚುನಾವಣೆ ಆಯೋಗವು ರಾಜ್ಯಸಭೆ ಚುನಾವಣೆ ದಿನಾಂಕ ಘೋಷಿಸಿದೆ. ಫೆಬ್ರವರಿ 27ರಂದು 56 ಸ್ಥಾನಗಳಿಗೆ ಚುನಾವಣೆ ನಡೆಯಲಿದೆ.