ಜೇವರ್ಗಿ(ಕಲಬುರಗಿ): ತಾಲೂಕಿನಲ್ಲಿ ಸತತವಾಗಿ ಸುರಿಯುತ್ತಿರುವ ಮಳೆಯಿಂದಾಗಿ ತೇವಾಂಶಗೊಂಡ ಮನೆಯೊಂದು ಕುಸಿದು ಬಾಲಕನೋರ್ವ ಮೃತಪಟ್ಟ ಘಟನೆ ಸೋಮವಾರ ಸಂಜೆ ನಡೆದಿದೆ. ತಾಲೂಕಿನ ಗುಡೂರ್ ಗ್ರಾಮದ ಚಂದ್ರಶೇಖರ್ ಶಿವಪ್ಪ (೧೦) ಎಂಬ ಬಾಲಕ ಮೃತಪಟ್ಟಿದ್ದಾನೆ. ಮನೆಯಲ್ಲಿದ್ದ ಅಜ್ಜಿ ಹಾಗೂ ಮೊಮ್ಮಗ ಅವಘಡದಲ್ಲಿ ಸಿಲುಕಿದ್ದಾರೆ. ಸ್ಥಳದಲ್ಲಿ ಬಾಲಕ ಮೃತಪಟ್ಟಿದ್ದು, ಅಜ್ಜಿ ಭಾಗಮ್ಮ(೬೦) ಸ್ಥಿತಿ ಚಿಂತಾಜನಕವಾಗಿದ್ದು, ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.