ಮನೆ ಗೋಡೆ ಕುಸಿದು ಮಹಿಳೆ ಸಾವು

ಸಾವು

ಹಾವೇರಿ: ಜಿಲ್ಲೆಯಲ್ಲಿ ಜಿಟಿಜಿಟಿ ಮಳೆ ಮುಂದುವರೆದಿದ್ದು, ಮನೆಯ ಗೋಡೆ ಕುಸಿದು ಮಳೆಯೊಬ್ಬರು ಮೃತಪಟ್ಟಿರುವ ಘಟನೆ ಹಾನಗಲ್ಲ ತಾಲೂಕಿನ ಕಿರವಾಡಿ ಗ್ರಾಮದಲ್ಲಿ ನಡೆದಿದೆ.
ಗ್ರಾಮದ ಶಾಂತವ್ವ ತಳವಾರ (55) ಮೃತಪಟ್ಟಿರುವ ದುರ್ದೈವಿಯಾಗಿದ್ದಾರೆ. ಕಳೆದ ಒಂದು ವಾರದಿಂದ ನಿರಂತರ ಮಳೆಗೆ ನೆನದಿದ್ದ ಮನೆಯ ಗೋಡೆ ಹಾಗೂ ಮೇಲ್ಛಾವಣಿ ಕುಸಿದು ಮಹಿಳೆ ಮೇಲೆ ಬಿದ್ದಿದೆ‌. ಪರಿಣಾಮ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಈ ಕುರಿತು ಹಾನಗಲ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.