ಮಾಜಿ ಶಾಸಕ ನಾಗರೆಡ್ಡಿ ಪಾಟೀಲ್​ ನಿಧನ

Advertisement

ಕಲಬುರಗಿ: ಸೇಡಂ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ, ಶಿಕ್ಷಣ ಪ್ರೇಮಿ, ಹಿರಿಯ ಮುತ್ಸದ್ದಿ ಡಾ.ನಾಗರೆಡ್ಡಿ ಪಾಟೀಲ್ ​(79) ಇಂದು ಬೆಳಗಿನ ಜಾವ ಹೃದಯಾಘಾತದಿಂದ ನಿಧನರಾಗಿದ್ದಾರೆ.
ಮೃತರಿಗೆ ಇಬ್ಬರು ಪುತ್ರರು ಹಾಗೂ ಪುತ್ರಿಯರು ಇದ್ದಾರೆ. ನಾಗರೆಡ್ಡಿ ಪಾಟೀಲ್​ ಅವರ ಪುತ್ರ ಶಿವಶರಣರೆಡ್ಡಿ ಸೇಡಂ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿದ್ದಾರೆ. 1983-85 ರ ಅವಧಿಯಲ್ಲಿ ಬಿಜೆಪಿ ಪಕ್ಷದಿಂದ ಶಾಸಕರಾಗಿದ್ದ ಡಾ. ನಾಗರೆಡ್ಡಿ ಅವರು ತದನಂತರ ಜನತಾದಳ ಸೇರ್ಪಡೆಯಾದರು. ಕಳೆದ ಎರಡು ದಶಕದಿಂದ ಕಾಂಗ್ರೆಸ್ ಪಕ್ಷದಲ್ಲಿದ್ದರು. ಮೇ 6 ರಂದು ಸ್ವಂತ ಹೊಲದಲ್ಲಿ ಅಂತ್ಯಕ್ರಿಯೆ ನಡೆಯಲಿದೆ.