ಮಾಸ್ ರೇಪಿಸ್ಟ್ ಪರ ಮತಯಾಚಿಸಿದ ಮೋದಿ ಕ್ಷಮೆ ಕೇಳಬೇಕು

Advertisement

ಶಿವಮೊಗ್ಗ: ವಿಡಿಯೋ ಪ್ರಕರಣ ಬಿಜೆಪಿಯವರಿಗೆ ಮೊದಲೇ ಗೊತ್ತಿದ್ದರೂ, ಮಾಸ್ ರೇಪಿಸ್ಟ್ ಪರ ಪ್ರಧಾನಿ ಮೋದಿ ಮತಯಾಚಿಸಿದ್ದಾರೆ. ಪ್ರಜ್ವಲ್ ರೇವಣ್ಣ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿಯವರು ಮಹಿಳೆಯರ ಕ್ಷಮೆ ಕೇಳಬೇಕು ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಒತ್ತಾಯಿಸಿದ್ದಾರೆ.
ಶಿವಮೊಗ್ಗದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ಪ್ರಚಾರ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, 400 ಮಹಿಳೆಯರ ಮೇಲೆ ಪ್ರಜ್ವಲ್ ರೇವಣ್ಣ ಅತ್ಯಾಚಾರ ಮಾಡಿದ್ದಾರೆ. ಇದು ಕೇವಲ ಅತ್ಯಾಚಾರ ಅಷ್ಟೇ ಅಲ್ಲ. ಇದೊಂದು ಸಾಮೂಹಿಕ ಅತ್ಯಾಚಾರ. ಒಬ್ಬ ಮಾಸ್ ರೇಪಿಸ್ಟ್ ಪರ ಪ್ರಧಾನಿ ಮೋದಿ ಅವರು ಮತಯಾಚಿಸಿರುವುದು ಇಡೀ ಜಗತ್ತಿಗೆ ಗೊತ್ತಾಗಿದೆ ಎಂದು ಗುಡುಗಿದ್ದಾರೆ.