ದಾವಣಗೆರೆ: ರಾಜ್ಯ ಸರ್ಕಾರಿ ನೌಕರರು ಮತ್ತು ಅವರ ಕುಟುಂಬಗಳಿಗೆ ನಗದು ರಹಿತ ಆರೋಗ್ಯ ಸೇವೆ ನೀಡುವ ಜ್ಯೋತಿ ಸಂಜೀವಿನಿ ಯೋಜನೆ ಮುಂದಿನ ತಿಂಗಳಿನಿಂದ ಜಾರಿಗೆ ಬರಲಿದೆ ಎಂದು ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್. ಷಡಕ್ಷರಿ ಹೇಳಿದರು.
ದಾವಣಗೆರೆಯಲ್ಲಿಂದು ರಾಜ್ಯ ಸರ್ಕಾರಿ ನೌಕರರ ಸಂಘದಿಂದ ಹಮ್ಮಿಕೊಂಡಿದ್ದ ದಾವಣಗೆರೆ, ಚಿತ್ರದುರ್ಗ ಜಿಲ್ಲೆಯ ಪ್ರತಿಭಾನ್ವಿತ ಎಸ್ಎಸ್ಎಲ್ಸಿ, ಪಿಯುಸಿ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರದಲ್ಲಿ ಅವರು ಮಾತನಾಡಿದರು.
106 ವರ್ಷಗಳ ಇತಿಹಾಸ ಹೊಂದಿರುವ ಸಂಘದ ಹಲವು ಬೇಡಿಕೆಗಳನ್ನು ಸರ್ಕಾರಗಳು ಈಡೇರಿಸಿವೆ. ಇನ್ನೂ ಹಲವು ಬೇಡಿಕೆಗಳು ಬಾಕಿ ಇದ್ದು, ಹಳೆ ಪಿಂಚಣಿ ಯೋಜನೆ ಜಾರಿಯಾಗಬೇಕಿದೆ ಎಂದರು.
ದಾವಣಗೆರೆ ಸಂಸದೆ ಡಾ. ಪ್ರಭಾ ಮಲ್ಲಿಕಾರ್ಜುನ ಇತರರು ಉಪಸ್ಥಿತರಿದ್ದರು. ಎಸ್ಎಸ್ಎಲ್ಸಿ ಮತ್ತು ಪಿಯುಸಿಯಲ್ಲಿ ಶೇ. 90ಕ್ಕಿಂತ ಅಧಿಕ ಅಂಕ ಪಡೆದಿರುವ ಚಿತ್ರದುರ್ಗ-ದಾವಣಗೆರೆ ಜಿಲ್ಲೆಯ ಸರ್ಕಾರಿ ನೌಕರರ ಮಕ್ಕಳನ್ನು ಸನ್ಮಾನಿಸಲಾಯಿತು.