ಯಾವ ಪುರಷಾರ್ಥಕ್ಕಾಗಿ ಸಾಧನಾ ಸಮಾವೇಶ

ಜಗದೀಶ ಶೆಟ್ಟರ್‌

ಹುಬ್ಬಳ್ಳಿ: ರಾಜ್ಯದಲ್ಲಿ ಅಭಿವೃದ್ಧಿ ಕಾರ್ಯ ಶೂನ್ಯವಾಗಿದೆ. ಕಾಂಗ್ರೆಸ್‌ನ ಶಾಸಕರೇ ಅಭಿವೃದ್ಧಿಗೆ ಹಣವಿಲ್ಲ ಎಂದು ಹೇಳುತ್ತಿದ್ದಾರೆ. ಹೀಗಿರುವಾ ಯಾವ ಪುರಷಾರ್ಥಕ್ಕಾಗಿ ಕಾಂಗ್ರೆಸ್ ಸಾಧನಾ ಸಮಾವೇಶ ಮಾಡುತ್ತಿದೆ ಎಂದು ಸಂಸದ ಜಗದೀಶ ಶೆಟ್ಟರ್ ಸರಕಾರಕ್ಕೆ ಪ್ರಶ್ನೆ ಮಾಡಿದ್ದಾರೆ.
ಶನಿವಾರ ನಗರದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಜಾಹಿರಾತಿಗಾಗಿ ಹಣ ಪೋಲು ಮಾಡುತ್ತಿದ್ದಾರೆ. ಆದರೆ ಅದನ್ನು ಅಭಿವೃದ್ಧಿ ಕಾರ್ಯಕ್ಕೆ ಬಳಬಹುದಿತ್ತು ಎಂದರು. ಜನರಲ್ಲಿ ಪೊಲೀಸ್ ವ್ಯವಸ್ಥೆ, ಸರಕಾರದ ಆಡಳಿತ ವ್ಯವಸ್ಥೆ ಬಗ್ಗೆ ನಂಬಿಕೆ ಕಳೆದು ಹೋಗಿದೆ. ಹೀಗಾಗಿ ಕೊಲೆ, ಸುಲಿಗೆ ನಿತ್ಯ ನಡೆಯುತ್ತಿವೆ. ಸಿದ್ಧರಾಮಯ್ಯ ಅವರು ವಿಫಲರಾಗಿದ್ದಾರೆ. ಅಭಿವೃದ್ಧಿ ಕೆಲಸಗಳು ಆಗುತ್ತಿಲ್ಲ ಎಂದರು.