ಬಾಗಲಕೋಟೆ: ಹುನಗುಂದ ತಾಲೂಕಿನ ಅಮೀನಗಡ ಬಳಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಇಬ್ಬರು ಮೃತಪಟ್ಟು, ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ.
ಗಂಗಮ್ಮ ಅಂಗಡಿ(೫೦), ಸಂದೇಶ ಅಂಗಡಿ(೧೮) ಮೃತಪಟ್ಟವರು. ಗಾಯಗೊಂಡಿರುವ ವೀರೇಶ ಅಂಗಡಿ ಹಾಗೂ ಸತೀಶ ಅಂಗಡಿ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಎರಡು ಕಾರ್ ನಡುವೆ ಮುಖಾಮುಖಿ ಢಿಕ್ಕಿಯಿಂದ ಈ ಘಟನೆ ನಡೆದಿದೆ ಎನ್ನಲಾಗಿದ್ದು, ಮತ್ತೊಂದು ಕಾರಿನ ಚಾಲಕನಿಗೂ ಗಾಯಗಳಾಗಿರುವ ಮಾಹಿತಿ ಲಭ್ಯವಾಗಿದೆ. ಸ್ಥಳಕ್ಕೆ ಅಮೀನಗಡ ಪೊಲೀಸರು ಭೇಟಿ ನೀಡಿ ಪರಿಶೀಲನೆ ಕೈಗೊಂಡಿದ್ದಾರೆ.