ಚಿಕ್ಕಬಳ್ಳಾಪುರ: ಗಣಿಗಾರಿಕೆ ಲಾರಿಗಳ ಓಡಾಟಕ್ಕೆ ರಸ್ತೆ ನಿರ್ಮಾಣಕ್ಕೆ ವಿರೋಧ ವ್ಯಕ್ತವಾಗಿದ್ದು ಎರಡು ಗುಂಪುಗಳ ನಡುವೆ ಬುಧವಾರ ಗಲಾಟೆ ನಡೆದಿದ್ದು ಸ್ಥಳೀಯ ರೈತ ರವಿ ಎಂಬುವವರ ಮೇಲೆ ಗುಂಡು ಹಾರಿಸಿದ ಘಟನೆ ನಡೆದಿದೆ.
ತಾಲ್ಲೂಕಿನ ಬಂಡಿರಾಮನಹಳ್ಳಿ, ಕನಗಾನಕೊಪ್ಪ, ರಾಯನಕಲ್ಲು ಗ್ರಾಮಗಳ ಸಮೀಪದ ಬೆಟ್ಟಗುಡ್ಡಗಳಲ್ಲಿ ಕಲ್ಲುಗಣಿಗಾರಿಕೆ, ಗಣಿಗಾರಿಕೆ ಲಾರಿಗಳ ಓಡಾಟಕ್ಕೆ ದಾರಿ ಮಾಡುವ ವಿಚಾರವಾಗಿ ಎರಡು ಗುಂಪುಗಳ ನಡುವೆ ಬುಧವಾರ ಗಲಾಟೆ ನಡೆದಿದ್ದು. ಗಣಿ ಮಾಲೀಕ ಸಕಲೇಶ್ ಎಂಬಾತ ಸ್ಥಳೀಯ ರೈತ ರವಿ ಎಂಬುವವರ ಮೇಲೆ ಗುಂಡು ಹಾರಿಸಿದ್ದಾನೆ. ಗುಂಡಿನಿಂದ ಗಾಯಗೊಂಡಿದ್ದ ರವಿಯನ್ನು ಚಿಕ್ಕಬಳ್ಳಾಪುರ ಜಿಲ್ಲಾ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ. ಸ್ಥಳಕ್ಕೆ ಚಿಕ್ಕಬಳ್ಳಾಪುರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕುಶಲ್ ಹಾಗೂ ದೀಪ್ತಿ ಎನ್ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಆರೋಪಿ ಸಕಲೇಶಕುಮಾರ್ನನ್ನು ಮಂಚೇನಹಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಗುಂಡು ಹಾರಿಸಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ