ರಾಜ್ಯದಲ್ಲಿ ಎಲ್ಲಿಯೂ ಅಭಿವೃದ್ಧಿ ಕಾರ್ಯಗಳು ನಡೆದಿಲ್ಲ

ಕುಷ್ಟಗಿ: ರಾಜ್ಯದಲ್ಲಿ ಅಭಿವೃದ್ಧಿ ಕುಂಠಿತವಾಗಿದ್ದು ಹೀಗಾಗಿ ಕಾಂಗ್ರೆಸ್ ಸರ್ಕಾರಕ್ಕೆ ಜನರು ಇಡೀ ಶಾಪ ಹಾಕುತ್ತಿದ್ದಾರೆ. ರಾಜ್ಯದ 224 ವಿಧಾನಸಭಾ ಕ್ಷೇತ್ರದಲ್ಲಿ ಎಲ್ಲಿಯೂ ಸಹ ಅಭಿವೃದ್ಧಿ ಕಾರ್ಯಗಳು ನಡೆದಿಲ್ಲ, ಇದರಿಂದಾಗಿ ಜನರು ತೊಂದರೆಗೆ ಒಳಗಾಗಿದ್ದಾರೆ. ರಾಜ್ಯದಲ್ಲಿ ಸಿಎಂ ಸಿದ್ದರಾಮಯ್ಯನವರ ಸರ್ಕಾರ ಬಂಡತನದಿಂದ ಆಡಳಿತ ನಡೆಸುತ್ತಿದೆ ಬಿಜೆಪಿ ಪಕ್ಷದ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಹೇಳಿದರು.

ಪಟ್ಟಣದ ಕೃಷ್ಣಾ ಭಾಗ್ಯ ಜಲ ನಿಗಮದ ನಿವೃತ್ತ ವ್ಯವಸ್ಥಾಪಕ ನಿರ್ದೇಶಕ ಪ್ರಭಾಕರ ಚಿಣಿ ಅವರ ಮಗನ ವಿವಾಹ ಕಾರ್ಯಕ್ರಮದಲ್ಲಿ ಭಾಗವಹಿಸಲು ಬಂದಿದ್ದ ವೇಳೆಯಲ್ಲಿ ಸುದ್ದಿಗರೊಂದಿಗೆ ಮಾತನಾಡಿ, ಈ ಸರ್ಕಾರ ರೈತ ವಿರೋಧಿ ಸರ್ಕಾರವಾಗಿದೆ. ಸಿದ್ದರಾಮಯ್ಯನವರ ಸರ್ಕಾರ ಜಾಹೀರಾತು ಸರ್ಕಾರವಾಗಿದೆ. ಮೂರು ಬಿಟ್ಟಂತಹ ರಾಜ ಸರ್ಕಾರ ಕೇವಲ ಜಾತಿ ಜಾತಿಗಳ ಮಧ್ಯೆ ವಿಷಬೀಜ ಬಿತ್ತುವ ಮೂಲಕ ಸರ್ಕಾರದ ಹಣವನ್ನು ಪೋಲು ಮಾಡುವ ಮೂಲಕ ಜಾತ್ರೆ ಮಾಡಿಕೊಳ್ಳಲು ಹೊರಟಿದ್ದಾರೆ. ಈ ಮೂಲಕ ಏನು ಸಾಧನೆ ಮಾಡಲು ಸಾಧ್ಯವಾಗುವುದಿಲ್ಲ. ಭಾರತೀಯ ಜನತಾ ಪಾರ್ಟಿ ವಿರೋಧ ಪಕ್ಷವಾಗಿ ಗಟ್ಟಿತನದಿಂದ ಸರ್ಕಾರದ ವೈಫಲ್ಯಗಳನ್ನು ಜನರಿಗೆ ಮುಟ್ಟಿಸುವ ಕಾರ್ಯ ಮಾಡುತ್ತಿದೆ ಎಂದರು.

ಪೊಲೀಸರ ಮೂಲಕ ಬೆದರಿಕೆ: ಕರಾವಳಿ ಭಾಗದಲ್ಲಿ ಇತ್ತೀಚಿಗೆ ಹಿಂದೂಪರ ಕಾರ್ಯಕರ್ತ ಸುಹಾಸ್ ಶೆಟ್ಟಿಯನ್ನು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ್ದಾರೆ. ಒಬ್ಬ ಮುಸಲ್ಮಾನನ ಹತ್ಯೆ ಸಹ ಆಗಿದೆ. ಇದರ ನಡುವೆ ರಾಜ್ಯ ಸರ್ಕಾರ ‌ಪರಿಸ್ಥಿತಿಯನ್ನು ಸರಿಯಾಗಿ ನಿರ್ವಹಣೆ ಮಾಡದೆ ಸಾಧ್ಯ ಸಾಧ್ಯವಾಗದೆ ಕಾನೂನು ವ್ಯವಸ್ಥೆ ಸರಿಪಡಿಸಬೇಕೆಂಬ ಕುಂಟು ನೆಪದಿಂದ ಪೊಲೀಸ್ ಇಲಾಖೆಯ ಅಧಿಕಾರಿಗಳ ಮೇಲೆ ಒತ್ತಡ ಹಾಕಿ ಅಮಾಯಕ ಹಿಂದು ಕಾರ್ಯಕರ್ತರನ್ನು ಅರೆಸ್ಟ್,ಕೇಸ್ ಗಳನ್ನು ಹಾಕುತ್ತಿದ್ದು ಸರಿಯಾದ ಕ್ರಮವಲ್ಲ ಪೊಲೀಸ್ ಇಲಾಖೆಯ ಮೂಲಕ ಪ್ರಚೋದನೆ ಕರಾವಳಿ ಭಾಗದಲ್ಲಿ ಮಾಡುತ್ತಿದೆ ಎಂದರು.