ರಾಜ್ಯದ ಜನರ ತೆರಿಗೆ ಹಣ, ಪಕ್ಕದ ರಾಜ್ಯದವರಿಗೆ ಪರಿಹಾರ

Advertisement

ಬೆಂಗಳೂರು: ನಮ್ಮ ರಾಜ್ಯದ ಜನರ ಬೆವರಿನ ತೆರಿಗೆ ಹಣವನ್ನು ಪಕ್ಕದ ರಾಜ್ಯದವರಿಗೆ ಪರಿಹಾರ ಕೊಟ್ಟಿದ್ದೀರಿ ಎಂದು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಹೇಳಿದ್ದಾರೆ.
ಕೇರಳದ ವಯನಾಡಿನಲ್ಲಿ ಆನೆ ತುಳಿತಕ್ಕೆ ಮೃತಪಟ್ಟಿದ್ದ ವ್ಯಕ್ತಿಗೆ ರಾಜ್ಯಸರ್ಕಾರ 15 ಲಕ್ಷ ಪರಿಹಾರ ನೀಡಿದ್ದು, ಕುರಿತು ವಿಧಾನಸೌದದ ಬಳಿ ಮಾದ್ಯಮದವರೊಂದಿಗೆ ಮಾತನಾಡಿರುವ ಅವರು ಆನೆಯಿಂದ ಮೃತಪಟ್ಟ ಕೇರಳದ ವ್ಯಕ್ತಿಗೆ 15 ಲಕ್ಷ ರೂ. ಪರಿಹಾರ ನೀಡುತ್ತಾರೆ. ನಮ್ಮ ರೈತರಿಗೆ 2 ಸಾವಿರ ರೂ. ಬರ ಪರಿಹಾರ ಕೊಡುತ್ತಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ರಾಷ್ಟ್ರೀಯ ನಾಯಕರು. ಅವರ ಸಲಹೆ ಮೇರೆಗೆ 15 ಲಕ್ಷ ರೂ. ಪರಿಹಾರ ಕೊಟ್ಟಿದ್ದಾರೆ. ಕೇರಳದಲ್ಲಿ ಆನೆ ದಾಳಿಯಿಂದ ಮೃತಪಟ್ಟರೆ 15 ಲಕ್ಷ ರೂ. ಕೊಡುತ್ತಾರೆ. ಆದರೆ ರಾಜ್ಯದಲ್ಲಿ ಆನೆದಾಳಿಯಿಂದ ಮೃತಪಟ್ಟರೆ 5 ಲಕ್ಷ ರೂ. ಕೊಡುತ್ತಾರೆ. ಆ ಹಣಕ್ಕೂ ಕಚೇರಿಗಳಿಗೆ ಅಲೆದಾಡಬೇಕು. ಕನ್ನಡಿಗರಿಗೆ ಅನ್ಯಾಯವಾಗಿದೆ ಎನ್ನುತ್ತಾರೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನಖರ್ಗೆಯವರು ಅನ್ಯಾಯದ ವಿರುದ್ಧ ಆಕ್ಷೇಪ ಮಾಡಬೇಕಿತ್ತಲ್ಲವೇ ಎಂದು ಪ್ರಶ್ನಿಸಿದರು. ಕೇಂದ್ರ ಸರ್ಕಾರದಿಂದ ಪರಿಹಾರವೇ ಬಂದಿಲ್ಲ ಎಂದು ಹೇಳುತ್ತಾರೆ. ಕನ್ನಡಿಗರಿಗೆ ಅನ್ಯಾಯವಾಗಿದೆ ಎನ್ನುತ್ತಾರೆ. ಕೇಂದ್ರ ಸಮಿತಿ ನೀಡುವ ಶಿಫಾರಸ್ಸಿನಂತೆ ರಾಜ್ಯಗಳಿಗೆ ಹಣ ನೀಡಲಾಗುತ್ತದೆ. ರಾಷ್ಟ್ರದ ಹಲವು ಆರ್ಥಿಕ ತಜ್ಞರ ಜೊತೆ ಮುಕ್ತ ಚರ್ಚೆ ಮಾಡೋಣ ಎಂದು ಹೇಳಿದರು.