ರಾಯ್‌ ಬರೇಲಿಯಿಂದ ರಾಹುಲ್‌ ಗಾಂಧಿ ಸ್ಪರ್ಧೆ

Advertisement

ರಾಯ್ ಬರೇಲಿಯಿಂದ ರಾಹುಲ್, ಅಮೇಥಿಯಿಂದ ಕೆಎಲ್ ಶರ್ಮಾ ಸ್ಪರ್ಧೆ

ನವದೆಹಲಿ: ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್​ ನಾಯಕ ರಾಹುಲ್​ ಗಾಂಧಿ ಉತ್ತರ ಪ್ರದೇಶದ ರಾಯ್​ ಬರೇಲಿ ಲೋಕಸಭಾ ಕ್ಷೇತ್ರದಿಂದ ಕಣಕ್ಕಿಳಿದಿದ್ದಾರೆ.
ಹಾಗೂ ಅಮೇಥಿಯಿಂದ ಕಿಶೋರಿ ಲಾಲ್​ ಶರ್ಮಾ ಲೋಕಸಭಾ ಕ್ಷೇತ್ರದಿಂದ ಕಣಕ್ಕಿಳಿದಿದ್ದಾರೆ. ರಾಹುಲ್ ಗಾಂಧಿ 2004 ರಿಂದ 2019 ರವರೆಗೆ ಸಂಸತ್ತಿನ ಕೆಳಮನೆಯಲ್ಲಿ ಅಮೇಥಿಯನ್ನು ಪ್ರತಿನಿಧಿಸಿದ್ದರು. ರಾಹುಲ್ ಗಾಂಧಿ ಅವರ ತಾಯಿ ಸೋನಿಯಾ ಗಾಂಧಿ 2004 ರಿಂದ 2024 ರವರೆಗೆ ರಾಯ್ ಬರೇಲಿ ಕ್ಷೇತ್ರವನ್ನು ಪ್ರತಿನಿಧಿಸಿದ್ದರು.