ಲೋಕಾಯುಕ್ತ ಅಧಿಕಾರಿಗಳಿಂದ ಕೇಂದ್ರದ ಯೋಜನಾಧಿಕಾರಿಗೆ ಶಾಕ್

ಗದಗ : ಗದಗ ನಿರ್ಮಿತಿ ಕೇಂದ್ರದ ಯೋಜನಾ ವ್ಯವಸ್ಥಾಪಕ ಗಂಗಾಧರ ಶಿರೋಳ ಮನೆಯ ಮೇಲೆ ಬೆಳ್ಳಂಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿ ದಾಖಲೆಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ.
ಗಂಗಾಧರ ಶಿರೋಳ ಆದಾಯಕ್ಕಿಂತ ಹೆಚ್ಚು ಆಸ್ತಿ ಗಳಿಕೆ ಆರೋಪ ಹಿನ್ನೆಲೆ ಸಿದ್ದಲಿಂಗ ನಗರದ ಗಂಗಾಧರ ಶಿರೋಳ ಮನೆ ಮತ್ತು ಇತರೆ ಆರು ಕಡೆಗಳಲ್ಲಿ ದಾಳಿ ನಡೆಸಲಾಗಿದೆ.
ಶಿರೋಳ ಅವರ ಅಳಿಯ ವಿಜಯ ಯಳಮೇಲಿ, ಭಾವ ನಾಗರಾಜ್ ಅಕ್ಕಿ, ವಿಜಯನಗರ ಜಿಲ್ಲೆಯ ಹೂವಿನ ಹಡಗಲಿ ಎಸ್ ಎಸ್ ಶೆಟ್ಟರ್, ಹಾವೇರಿ ಜಿಲ್ಲೆಯಲ್ಲಿ ಸಂಬಧಿಕರ ಮನೆ ಮೇಲೆ ದಾಳಿ ನಡೆಸಿ ದಾಖಲೆಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ.
ಲೋಕಾಯುಕ್ತ ಎಸ್ಪಿ ಹನಮಂತರಾಯ, ಡಿವೈಎಸ್ಪಿ ವಿಜಯ ಬಿರಾದಾರ ನೇತೃತ್ವದಲ್ಲಿ ದಾಳಿ ನಡೆದಿದೆ.