ವಾಲ್ಮೀಕಿ ನಿಗಮದ ಅನುದಾನ ದುರ್ಬಳಕೆ ಹಗರಣ: ಸಿಬಿಐ ತನಿಖೆಗೆ ಆದೇಶ

ಬೆಂಗಳೂರು: ಮಹತ್ವದ ಬೆಳವಣಿಗೆಯೊಂದರಲ್ಲಿ ಕರ್ನಾಟಕ ಹೈಕೋರ್ಟ್ ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ದುರ್ಬಳಕೆ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಿ ಆದೇಶಿದೆ. ಕರ್ನಾಟಕ ಸರ್ಕಾರ ಪ್ರಕರಣದ ಕುರಿತು ಎಸ್‌ಐಟಿ ತನಿಖೆಯನ್ನು ನಡೆಸಲು ಆದೇಶವನ್ನು ಹೊರಡಿಸಿತ್ತು.

ಕರ್ನಾಟಕದ ರಾಜಕೀಯದಲ್ಲಿ ಭಾರೀ ಚರ್ಚೆಗೆ ಕಾರಣವಾದ ಹಗರಣ ಇದಾಗಿದೆ. ಈ ಹಗರಣದ ಆರೋಪ ಕೇಳಿಬಂದ ಬಳಿಕ ಪರಿಶಿಷ್ಟ ವರ್ಗಗಳ ಕಲ್ಯಾಣ ಸಚಿವ ಬಿ.ನಾಗೇಂದ್ರ ರಾಜೀನಾಮೆ ನೀಡಿದ್ದರು. ಈ ಹಗರಣದಲ್ಲಿ ಇಡಿ ಸಹ ತನಿಖೆ ಕೈಗೊಂಡಿದ್ದು, ಬಿ. ನಾಗೇಂದ್ರ ಬಂಧಿಸಲಾಗಿತ್ತು.

ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಲ್ಲಿ ಸುಮಾರು 94.73 ಕೋಟಿ ಹಣ ಅಕ್ರಮ ನಡೆದಿದೆ ಎಂಬುದು ಆರೋಪವಾಗಿದೆ. ಈ ಪ್ರಕರಣದ ಕುರಿತು ಸಿಬಿಐ ತನಿಖೆ ನಡೆಸಲು ನಿರ್ದೇಶನ ನೀಡಬೇಕು ಎಂದು ಯೂನಿಯನ್ ಬ್ಯಾಂಕ್ ಕರ್ನಾಟಕ ಹೈಕೋರ್ಟ್‌ಗೆ ಅರ್ಜಿ ಸಲ್ಲಿಕೆ ಮಾಡಿತ್ತು.