ವಿಜಯಪುರ ಸುತ್ತಮುತ್ತಲಿನ ಜಿಲ್ಲೆಗಳು ಸಕ್ಕರೆ ನಾಡಾಗಿ ಪರಿವರ್ತನೆಯಾಗಿದೆ

ಕೊಲ್ಹಾರ ಪಟ್ಟಣದ ಅಭಿವೃದ್ಧಿಗೆ ₹50 ಕೋಟಿ

ವಿಜಯಪುರ: ಮಂಡ್ಯ ನಂತರ ವಿಜಯಪುರ ಭಾಗದ ಜಿಲ್ಲೆಗಳು ಸಕ್ಕರೆ ನಾಡಾಗಿ ಮಾರ್ಪಟ್ಟಿವೆ. ಈ ಭಾಗದ ರೈತರ ಬದುಕು ಹಸನಾಗಿಸಲು ನಾವು ಬದ್ಧರಾಗಿದ್ದೇವೆ. ಈ ಭಾಗದಲ್ಲಿ ಕಾರ್ಖಾನೆಗಳು ಆರಂಭವಾಗಿ, ಉದ್ಯೋಗಗಳು ಸೃಷ್ಟಿಯಾಗುತ್ತಿವೆ ಎಂದು ಉಪಮುಖ್ಯಮಂತ್ರಿ ಡಿ. ಕೆ. ಶಿವಕುಮಾರ ಹೇಳಿದ್ದಾರೆ.
ವಿಜಯಪುರ ಜಿಲ್ಲೆಯ ಕೊಲ್ದಾರದಲ್ಲಿ ವಿವಿಧ ಅಭಿವೃದ್ಧಿ ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆಯನ್ನು ನೆರವೇರಿಸಿ ಮಾತನಾಡಿ ಶಿವಾನಂದ ಪಾಟೀಲರು, ಎಸ್‌ಆರ್‌ ಪಾಟೀಲರು ಈ ಭಾಗದಲ್ಲಿ ಉತ್ತಮ ಕೆಲಸ- ಕಾರ್ಯಗಳನ್ನು ಮಾಡುತ್ತಿದ್ದಾರೆ. ಅವರು ಈ ಕ್ಷೇತ್ರದ ಅಭಿವೃದ್ಧಿಗಾಗಿ ಬೇಡಿಕೆ ಇಡುತ್ತಲೇ ಇರುತ್ತಾರೆ. ಹೀಗಾಗಿ, ಈ ಕೊಲ್ಹಾರ ಪಟ್ಟಣದ ಸಮಗ್ರ ಅಭಿವೃದ್ಧಿಗೆ ₹ 50 ಕೋಟಿ ವಿಶೇಷ ಅನುದಾನವನ್ನು ಘೋಷಿಸುತ್ತಿದ್ದೇನೆ. ರಾಜ್ಯದಲ್ಲಿ ಸುಭದ್ರವಾದ ಸರ್ಕಾರ ಆಡಳಿತದಲ್ಲಿದೆ. ಎಲ್ಲಾ ಸಮುದಾಯದ ಅಭಿವೃದ್ಧಿಗೆ ನಮ್ಮ ಸರ್ಕಾರ ಸಿದ್ಧವಿದ್ದು, ಮುಂಬರುವ ಚುನಾವಣೆಯಲ್ಲಿಯೂ ರಾಜ್ಯದಲ್ಲಿ ಮತ್ತೆ ನಮ್ಮ ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬರಲಿದೆ ಎಂಬ ವಿಶ್ವಾಸ ನನಗಿದೆ. ನಮ್ಮ ಸರ್ಕಾರ ಬಡತನದ ವಿರುದ್ಧ ಯುದ್ಧ ಮಾಡುತ್ತಿದೆ. ಎಲ್ಲಾ ಸಮುದಾಯಕ್ಕೂ ನ್ಯಾಯ ಸಿಗಲು ಕೆಲಸ ಮಾಡುತ್ತಿದ್ದೇವೆ. ವಿರೋಧಿ ಪಕ್ಷದವರ ಯಾವ ಅಪಪ್ರಚಾರಕ್ಕೂ ಕಿವಿಗೊಡಬೇಡಿ. ನಮ್ಮ ಸಂಕಲ್ಪ ನಿಮ್ಮ ನೆಮ್ಮದಿಯ ಬದುಕು. ರೈತರಿಗೆ ಉತ್ತಮ ಜೀವನ ಕಲ್ಪಿಸಿಕೊಡಬೇಕು ಎನ್ನುವುದು ನಮ್ಮ ಆದ್ಯತೆ. ವಿಜಯಪುರ ಮತ್ತು ಸುತ್ತಮುತ್ತಲಿನ ಜಿಲ್ಲೆಗಳು ಈಗ ಸಕ್ಕರೆ ನಾಡಾಗಿ ಪರಿವರ್ತನೆಯಾಗಿದೆ. ಇಲ್ಲಿ ಉದ್ಯೋಗ ಸೃಷ್ಟಿಯಾಗುತ್ತಿದೆ. ನಮ್ಮ ಸರ್ಕಾರ ಕೂಡ ಈ ನಿಟ್ಟಿನಲ್ಲಿ ಆಡಳಿತ ನಡೆಸುತ್ತಿದ್ದು, ಇದಕ್ಕೆ ಬಸವಣ್ಣನವರೇ ಮಾರ್ಗದರ್ಶನ, ಅವರೇ ನಮ್ಮ ಶಕ್ತಿ ಎಂದರು.