ವಿದ್ಯುತ್ ಕಂಬಕ್ಕೆ ಡಿಕ್ಕಿಯಾದ ಕಾರು: ಪ್ರಯಾಣಿಕರು ಪ್ರಾಣಾಪಾಯದಿಂದ ಪಾರು

ಬಾಗಲಕೋಟೆ (ಕುಳಗೇರಿ ಕ್ರಾಸ್): ಗ್ರಾಮದ ರಾಷ್ಟ್ರೀಯ ಹೆದ್ದಾರಿ 218ರಲ್ಲಿ ಕಾರೊಂದು ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿದ್ದು, ಕಾರಿನಲ್ಲಿದ್ದ   ವೈದ್ಯ ರಮೇಶ್ ಶಿವಲಿಂಗಪ್ಪ ಸಜ್ಜನ್ನವರ 60 ತಲೆಯ ಭಾಗಕ್ಕೆ ತಿವ್ರವಾಗಿ ಪೆಟ್ಟಾಗಿದ್ದು ಹೆಚ್ಚಿನ ಚಿಕಿತ್ಸೆಗಾಗಿ 108 ವಾಹನದಲ್ಲಿ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದ್ದು ಚಿಕಿತ್ಸೆ ಪಡೆಯುತ್ತಿದ್ದಾರೆಂದು ತಿಳಿದುಬಂದಿದೆ.

ಕಾರ್ ಚಲಾವಣೆ ಮಾಡುತ್ತಿದ್ದ ಮಗ ಆಯುಷ್ಯ ರಮೇಶ್ ಸಜ್ಜನ್ನವರ ಹಾಗೂ ಆತನ ತಾಯಿ  ಆಶ್ಚರ್ಯಕರ ರೀತಿಯಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಹುಬ್ಬಳ್ಳಿ ಯಿಂದ ವಿಜಯಪೂರಕ್ಕೆ ಕಾರ್ ನಲ್ಲಿ ಪ್ರಯಾಣಿಸುತ್ತಿದ್ದರು ಎಂದು ತಿಳಿದುಬಂದಿದೆ.

ಕುಳಗೇರಿ ಕ್ರಾಸ್ ಕೆಇಬಿ ಹತ್ತಿರ ನಯಾರ್ ಪೆಟ್ರೋಲ್ ಬಂಕ್ ಎದುರಿಗೆ ನಿಯಂತ್ರಣ ತಪ್ಪಿ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿದ್ದ ವಿದ್ಯುತ್ ಕಂಬಕ್ಕೆ ಕಾರ್ ಡಿಕ್ಕಿಯಾದ ಪರಿಣಾಮ ವಿದ್ಯುತ್ ಕಂಬ ಮುರಿದುಬಿದ್ದಿದೆ. ನಂತರ ಕಾರು ಮರಕ್ಕೆ ಅಪ್ಪಳಿಸಿದ್ದು ಕಾರ್ ಮುಂಬಾಗ ಸಂಪೂರ್ಣ ನುಜ್ಜುಗುಜ್ಜಾಗಿದೆ.

ಸ್ಥಳಕ್ಕೆ ಸ್ಥಳೀಯ ಪೊಲೀಸರು ಭೇಟಿ ನಿಡಿದ್ದು ಪರಿಶೀಲನೆ ನಡೆಸಿದ್ದಾರೆ. ಕಾರ್ ಚಲಾಯಿಸುತ್ತಿದ್ದ ಪುತ್ರ ಆಯುಷ್ಯ ಸಜ್ಜನರ ಹಾಗೂ ಆತನ ತಾಯಿ ಅಪಾಯದಿಂದ ಪಾರಾಗಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.