ವಿನಯ್ ಆತ್ಮಹತ್ಯೆ ಪ್ರಕರಣ: ಸಿಬಿಐ ತನಿಖೆಗೆ ವಿಜಯೇಂದ್ರ ಒತ್ತಾಯ

ಮಡಿಕೇರಿ: ಕೊಡಗಿನ ಬಿಜೆಪಿ ಕಾರ್ಯಕರ್ತ ವಿನಯ್ ಸೋಮಯ್ಯ ಆತ್ಮಹತ್ಯೆ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಆಗ್ರಹಿಸಿದ್ದಾರೆ.
ಸರ್ಕಾರದ ವಿರುದ್ಧ ಟೀಕೆ ಮಾಡಿದರೆ ವಾಟ್ಸ್ಯಾಪ್‌ ಗ್ರೂಪ್‌ಗಳ ಅಡ್ಮಿನ್‌ಗಳ ಮೇಲೆ ಎಫ್‌ಐಆರ್‌ ದಾಖಲಿಸುವ, ಬಂಧಿಸುವ ಕೆಟ್ಟ ಸಂಪ್ರದಾಯಕ್ಕೆ ಕಾಂಗ್ರೆಸ್‌ ಸರ್ಕಾರ ನಾಂದಿ ಹಾಡಿದೆ. ರಾಜ್ಯದ ಪೊಲೀಸ್‌ ಠಾಣೆಗಳು ಕಾಂಗ್ರೆಸ್‌ ಕಚೇರಿಯಂತಾಗಿವೆ. ವಿನಯ್‌ ಸೋಮಯ್ಯ ಅವರ ಪ್ರಕರಣದಲ್ಲಿ ಶಾಸಕರ ಹೆಸರನ್ನು ಸೇರಿಸಲೇ ಬೇಕು, ಇಲ್ಲದಿದ್ದರೆ ಮುಂದಿನ ಅನಾಹುತಗಳಿಗೆ ಪೊಲೀಸ್‌ ಇಲಾಖೆ ಮತ್ತು ಸರ್ಕಾರವೇ ಹೊಣೆಯಾಗಲಿದೆ. ಅಪರಾಧಿಗಳು ಅವರ ರಾಜಕೀಯ ಸ್ಥಾನಮಾನವನ್ನು ಲೆಕ್ಕಿಸದೆ, ಕಾನೂನಿನಡಿಯಲ್ಲಿ ಹೊಣೆಗಾರರಾಗಬೇಕು. ಈ ಸರ್ವಾಧಿಕಾರಿ ಮತ್ತು ದಮನಕಾರಿ ಸಿದ್ದರಾಮಯ್ಯ ಸರ್ಕಾರದ ಮೇಲೆ ಆಕ್ರೋಶ ಎದುರಿಸುತ್ತಿರುವ ನಮ್ಮ ಧೈರ್ಯಶಾಲಿ ಕಾರ್ಯಕರ್ತರೊಂದಿಗೆ ನಾವು ಅಚಲವಾಗಿ ಒಗ್ಗಟ್ಟಿನಿಂದ ನಿಲ್ಲುತ್ತೇವೆ ಎಂದರು.