ಕೋಲಾರ: ಅಹಮದಾಬಾದ್ ವಿಮಾನ ದುರಂತದಲ್ಲಿ ಮೃತಪಟ್ಟ ಪ್ರತೀಕ್ ಜೋಶಿ ಮತ್ತು ಅವರ ಪತ್ನಿ ಹಾಗೂ ಮೂವರು ಮಕ್ಕಳ ಸಾವು ಪ್ರಕರಣವು ಇಲ್ಲಿನ ದೇವರಾಜ ಅರಸು ವೈದ್ಯಕೀಯ ಕಾಲೇಜಿನಲ್ಲಿ ಸಹ ಶೋಕದ ವಾತಾವರಣ ಮೂಡಿಸಿದೆ.
೨೦೦೫ರಲ್ಲಿ ರೇಡಿಯಾಲಜಿ ವಿಭಾಗದಲ್ಲಿ ಸ್ನಾತಕೋತ್ತರ ಪದವಿ ವ್ಯಾಸಂಗ ಮಾಡಿದ್ದ ಪ್ರತೀಕ್ ಜೋಶಿ ನಂತರ ಇಂಗ್ಲೆಂಡಿಗೆ ತೆರಳಿದ್ದರು.
ಜೋಶಿ ಮತ್ತು ಕುಟುಂಬದ ದುರಂತ ಸಾವಿನ ಹಿನ್ನೆಲೆಯಲ್ಲಿ ಕಾಲೇಜು ಆಡಳಿತ ಮಂಡಳಿಯಿಂದ ಶುಕ್ರವಾರ ಶ್ರದ್ಧಾಂಜಲಿ ಸಲ್ಲಿಸಲಾಯಿತು.
ಅವರ ಕುಟುಂಬದ ಫೋಟೋಗೆ ಪುಷ್ಪ ನಮನ ಸಲ್ಲಿಸಿದ ಕಾಲೇಜು ಆಡಳಿತ ಮಂಡಳಿ ಮತ್ತು ವಿದ್ಯಾರ್ಥಿಗಳು ಎರಡು ನಿಮಿಷ ಮೌನ ಆಚರಿಸಿ ಆತ್ಮಕ್ಕೆ ಶಾಂತಿ ಕೋರಿದರು.