ವೈಭವ್ ಸೂರ್ಯವಂಶಿಯನ್ನು ಭೇಟಿಯಾದ ಮೋದಿ

ನವದೆಹಲಿ: ಐಪಿಎಲ್ ಪಂದ್ಯದಲ್ಲಿ ಅತೀ ಕಡಿಮೆ ಬಾಲ್‌ನಲ್ಲಿ ಶತಕ ಸಿಡಿಸುವ ಮೂಲಕ ದಾಖಲೆ ನಿರ್ಮಿಸಿದ್ದ 14 ವರ್ಷದ ಕ್ರಿಕೆಟಿಗ ವೈಭವ್ ಸೂರ್ಯವಂಶಿಯನ್ನು ಪಾಟ್ನಾದ ಜೈ ಪ್ರಕಾಶ್ ನಾರಾಯಣ್ ವಿಮಾನ ನಿಲ್ದಾಣದಲ್ಲಿ ಪ್ರಧಾನಿ ನರೇಂದ್ರ ಮೋದಿ ಭೇಟಿಯಾಗಿದ್ದಾರೆ. ಈ ಕುರಿತಂತೆ ಪ್ರಧಾನಿ ಮೋದಿ ಅವರು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿ “ಪಾಟ್ನಾ ವಿಮಾನ ನಿಲ್ದಾಣದಲ್ಲಿ, ಯುವ ಕ್ರಿಕೆಟ್ ಸಂವೇದನೆ ವೈಭವ್ ಸೂರ್ಯವಂಶಿ ಮತ್ತು ಅವರ ಕುಟುಂಬವನ್ನು ಭೇಟಿಯಾದೆ. ಅವರ ಕ್ರಿಕೆಟ್ ಕೌಶಲ್ಯವನ್ನು ದೇಶಾದ್ಯಂತ ಪ್ರಶಂಸಿಸಲಾಗುತ್ತಿದೆ! ಅವರ ಭವಿಷ್ಯದ ಪ್ರಯತ್ನಗಳಿಗೆ ನನ್ನ ಶುಭಾಶಯಗಳು” ಎಂದಿದ್ದಾರೆ. ಈ ವೇಳೆ ವೈಭವ್ ಅವರ ಪೋಷಕರು ಸಹ ಹಾಜರಿದ್ದರು.