ಗದಗ: ಮಿನಿ ಕ್ಯಾಂಟರ್ ಡಿಕ್ಕಿಯಾಗಿ ಶಾಲಾ ಬಸ್ ಪಲ್ಟಿ ಹೊಡೆದ ಘಟನೆ ನಡೆದಿದೆ.
ನಗರದ R.K.ನಗರ ಬಳಿಯ ಅಂಡರ್ಪಾಸ್ನಲ್ಲಿ ಈ ಘಟನೆ ನಡೆದಿದ್ದು. ವಿದ್ಯಾರ್ಥಿಗಳನ್ನು ಕರೆತರಲು ಹೊರಟಿದ್ದಾಗ ಈ ಘಟನೆ ಸಂಭವಿಸಿದ್ದರಿಂದ, ಬಸ್‌ನಲ್ಲಿ ಯಾವುದೇ ಮಕ್ಕಳು ಇಲ್ಲದ್ದರಿಂದ, ಭೀಕರ ಅನಾಹುತ ತಪ್ಪಿದೆ. ಶ್ರೀಪಾರ್ಶ್ವನಾಥ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ಸ್ಕೂಲ್ ಬಸ್ಗೆ ಮಿನಿ ಕ್ಯಾಂಟರ್ ಡಿಕ್ಕಿಯಾಗಿ ಪಲ್ಟಿ ಹೊಡೆದಿದೆ. ಘಟನೆಯಲ್ಲಿ ಬಸ್ ಚಾಲಕನಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಗದಗ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.