ಬೆಂಗಳೂರು: ರಾಜ್ಯದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದ ಮೇಲೆ ಬಿಜೆಪಿ ವಿಧಾನ ಪರಿಷತ್ ಸದಸ್ಯ ಎನ್.ರವಿಕುಮಾರ್ ವಿರುದ್ದ ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ವಿಧಾನಸೌಧದಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವಿಧಾನಪರಿಷತ್ ವಿಪಕ್ಷ ಮುಖ್ಯ ಸಚೇತಕ ಎನ್ ರವಿಕುಮಾರ್ ಅವರು “ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ಅವರು ರಾತ್ರಿಯಿಡೀ ರಾಜ್ಯ ಸರ್ಕಾರಕ್ಕಾಗಿ ಮತ್ತು ಇಡೀ ದಿನ ಮುಖ್ಯಮಂತ್ರಿಗಾಗಿ ಕೆಲಸ ಮಾಡುತ್ತಾರೆ ಎಂದಿರುವ ಎಂದು ಬಿಜೆಪಿಯ ಎನ್.ರವಿಕುಮಾರ್ ಹೇಳಿಕೆ ನೀಡಿದ್ದು ಈ ದ್ವಂದ್ವ ಮಾತುಗಳು ಆಶ್ಚರ್ಯ ಹಾಗೂ ಅಸಹನೀಯವಾಗಿದೆ. ಇವರ ಹೇಳಿಕೆಯು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ಈ ನಿಟ್ಟಿನಲ್ಲಿ ರವಿಕುಮಾರ್ ವಿರುದ್ದ ಪ್ರಕರಣವನ್ನು ದಾಖಲಿಸಿಕೊಂಡು ತನಿಖೆ ನಡೆಸಬೇಕು ಎಂದು ಆಗ್ರಹಿಸಿದೆ.