ಬಾಗಲಕೋಟೆ(ಜಮಖಂಡಿ): ಸ್ಥಳೀಯ ತುಂಗಳ ಶಾಲೆಯಲ್ಲಿ ಕನ್ನಡ ವಿಷಯ ಭೋದನಾ ಶಿಕ್ಷಕರಾಗಿ ಕಾರ್ಯನಿರ್ವಹಿಸುತ್ತಿದ್ದ ಗುರುಪಾದ ಕಾಶಿರಾಯ ಹಿಪ್ಪರಗಿ (46) ಹಠಾತ್ ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ನಡೆದಿದೆ.
ರಬಕವಿ-ಬನಹಟ್ಟಿ ತಾಲೂಕಿನ ನಾವಲಗಿ ಗ್ರಾಮದ ನಿವಾಸಿ ಶಿಕ್ಷಕ ಗುರುಪಾದ ಹಿಪ್ಪರಗಿ ಶಾಲಾ ಪ್ರಾರ್ಥನೆ ಮುಗಿಸಿ ತರಗತಿಗೆ ತೆರಳುವಾಗ ಏಕಾಏಕಿ ಎದೆ ನೋವು ಕಾಣಿಸಿಕೊಂಡು ಹೃದಯಾಘಾತ ಸಂಭವಿಸಿ ಮೃತಪಟ್ಟಿದ್ದಾರೆ.