ಶಾಸಕ ಗಂಟಿಹೊಳೆ ಕಾರು ಅಪಘಾತ

ಉಡುಪಿ: ಜಾನುವಾರು ಅಡ್ಡ ಬಂದ ಪರಿಣಾಮ ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ ಕಾರು ಸೇರಿ ಮೂರು ಕಾರುಗಳು ಶುಕ್ರವಾರ ಸಂಜೆ ಹೊಸನಗರ ಕೋಡೂರು ಬಳಿ ಅಪಘಾತಕ್ಕೀಡಾದ ಘಟನೆ ಸಂಭವಿಸಿದೆ. ಸರಣಿ ಅಪಘಾತದಲ್ಲಿ ಶಾಸಕರ ಕಾರು ಸೇರಿದಂತೆ 3 ಕಾರುಗಳು ಸ್ವಲ್ಪ ಮಟ್ಟಿಗೆ ಜಖಂಗೊಂಡಿದ್ದು, ಅದೃಷ್ಟವಶಾತ್ ಕಾರಿನಲ್ಲಿದ್ದ ಪ್ರಯಾಣಿಕರಿಗೆ ಯಾವುದೇ ಅಪಾಯ ಸಂಭವಿಸಿಲ್ಲ. ರಿಪ್ಪನ್ ಪೇಟೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಶಾಸಕ ಗುರುರಾಜ್ ಗಂಟಿಹೊಳೆ ಮರಳಿ ಬೈಂದೂರು ಕಡೆ ಪ್ರಯಾಣ ಬೆಳೆಸಿದರು.