ಮಂಗಳೂರು: ವ್ಯಾಪಕ ಮಳೆ ಹಿನ್ನಲೆಯಲ್ಲಿ ಶಿರಾಡಿ ಘಾಟ್ ಭೂಕುಸಿತ, ವಾಹನ ಸಂಚಾರ ಬಂದ್: ಮಂಗಳೂರು ಕಡೆ ಹೋಗುವವರಿಗೆ ಬದಲಿ ಮಾರ್ಗ ಬಳಸಲು ಸೂಚನೆ ನೀಡಲಾಗಿದೆ.
ಸಕಲೇಶಪುರ ತಾಲ್ಲೂಕಿನ, ಮಾರನಹಳ್ಳಿ ಬಳಿ ಗುಡ್ಡ ಕುಸಿದ ಕಾರಣ ಶಿರಾಡಿ ಘಾಟ್ ರಸ್ತೆಯಲ್ಲಿ ವಾಹನ ಸಂಚಾರವನ್ನು ಬಂದ್ ಮಾಡಲಾಗಿದೆ. ತಡರಾತ್ರಿ ಮರಗಳ ಸಮೇತ ರಸ್ತೆಗೆ ಅಡ್ಡಲಾಗಿ ಗುಡ್ಡ ಕುಸಿದ ಕಾರಣ ಟ್ರಾಫಿಕ್ ಜಾಮ್‌ನಲ್ಲಿ ಸಿಲುಕಿ ವಾಹನ ಸವಾರರು ಪರದಾಟ ಅನುಭವಿಸಿದ್ದಾರೆ. ಮಂಗಳೂರಿಗೆ ಕಡೆ ಹೋಗುವವರು ಬದಲಿ ಮಾರ್ಗ ಸೂಚಿಸಲಾಗಿದ್ದು ಮಂಗಳೂರು ಕಡೆಗೆ ತೆರಳುವ ವಾಹನಗಳಿಗೆ ಬೇಲೂರು ಮೂಲಕ ಚಾರ್ಮಾಡಿ ಘಾಟ್ ರಸ್ತೆ ಬಳಸುವಂತೆ ಸೂಚನೆ ನೀಡಲಾಗಿದೆ. ಮಂಗಳೂರು ಕಡೆಯಿಂದ ಬರುವ ವಾಹನ ಸವಾರರು ಕೊಡಗಿನ ಸಂಪಾಜೆ ಮಾರ್ಗದಲ್ಲಿ ಸಂಚರಿಸಲು ಸೂಚನೆ ನೀಡಿ ಹಾಸನ ಡಿಸಿ ಲತಾಕುಮಾರಿ ಆದೇಶ ಹೊರಡಿಸಿದ್ದಾರೆ.