Home ತಾಜಾ ಸುದ್ದಿ ಶೀಘ್ರ ಸಿಎಂ ಸ್ಥಾನ‌ಪಲ್ಲಟ

ಶೀಘ್ರ ಸಿಎಂ ಸ್ಥಾನ‌ಪಲ್ಲಟ

ಮೈಸೂರು: ಶೀಘ್ರ ಸಿಎಂ‌ ಸಿದ್ದರಾಮಯ್ಯ ಸ್ಥಾನ‌ ಪಲ್ಲಟವಾಗಲಿದೆ ಎಂದು ಬಿಜೆಪಿ‌ ರಾಜ್ಯಾಧ್ಯಕ್ಷ‌ ವಿಜಯೇಂದ್ರ ಹೇಳಿದರು.
ನಗರದಲ್ಲಿ ಭಾನುವಾರ ಸುದ್ದಿಗೋಷ್ಟಿಯಲ್ಲಿ ಮಾತನಾಡಿ. ರಾಜ್ಯ ಸರ್ಕಾರದ ವೈಫಲ್ಯಗಳ‌ ವಿರುದ್ದ ವಾಗ್ದಾಳಿ ನಡೆಸಿದ ಅವರು, ರಾಜ್ಯದಲ್ಲಿ ಭ್ರಷ್ಟಾಚಾರ ತಾಂಡವವಾಡುತ್ತಿದೆ. ಜನರಿಗೆ ಬರೆ ಹಾಕುವಂತಹ ಕೆಲಸವನ್ನು ಸರ್ಕಾರ ಮಾಡುತ್ತಿದೆ. ರಾಜ್ಯದಲ್ಲಿ ‌ನಡೆಯುತ್ತಿರುವ ಭ್ರಷ್ಟಾಚಾರ ನೋಡಿದರೆ ಒಂದು ವರ್ಷದ ಹಿಂದೆಯೇ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕಿತ್ತು. ಸಿದ್ದರಾಮಯ್ಯ ಭಂಡತನದಿಂದ ಮುಂದುವರಿದಿದ್ದಾರೆ‌. ಇದು ಭಂಢ ಸರ್ಕಾರ ಎಂದರು.
ಕಾಂತರಾಜು ಆಯೋಗದ ವರದಿಯನ್ನು ತಮ್ಮ ಅನುಕೂಲಕ್ಕೆ ಬಳಸಿಕೊಂಡರು. ರಾಜಕೀಯ ಅಸ್ಥಿರತೆ ಕಾಡಿದಾಗಲೆಲ್ಲ ಕಾಂತರಾಜು ಆಯೋಗದ ವರದಿ ಜಾರಿ ಮಾಡುವುದಾಗಿ ಹೇಳುತ್ತಾ ಬಂದರು. ಇದೀಗ ಕಾಂಗ್ರೆಸ್ ಹೈಕಮಾಂಡ್ ಸೂಚನೆ ಮೇರೆಗೆ ಕಾಂತರಾಜು ಆಯೋಗದ ವರದಿಯನ್ನು ಕಸದ ಬುಟ್ಟಿಗೆ ಎಸೆದಿದ್ದಾರೆ. ಆ ಬಳಿಕ ಒಳಮೀಸಲಾತಿ ನೀಡುವುದಾಗಿ ಸಮೀಕ್ಷೆ ಮಾಡಿಸುತ್ತಿದ್ದಾರೆ. ಮೀಸಲಾತಿ ವಿಚಾರವನ್ನು ರಾಜಕೀಯ ಅಸ್ತ್ರ ವನ್ನಾಗಿ ಮಾಡಿಕೊಂಡಿದ್ದಾರೆ. ಜಾತಿ ಜಾತಿಗಳ ನಡುವೆ ವೈಷಮ್ಯ ಉಂಟು ಮಾಡುತ್ತಿದ್ದಾರೆ. ಸಿದ್ದರಾಮಯ್ಯ ರಾಜೀನಾಮೆ ಪಡೆದು ದೆಹಲಿಗೆ ವರ್ಗಾವಣೆ ಮಾಡಲು ಕಾಂಗ್ರೆಸ್ ಹೈಕಮಾಂಡ್ ಸಿದ್ದತೆ ಮಾಡಿಕೊಂಡಿದೆ. ಸಿಎಂ ಸಿದ್ದರಾಮಯ್ಯ ಮುಖ್ಯಮಂತ್ರಿ ಸ್ಥಾನದಿಂದ ಪಲ್ಲಟವಾಗುವ ದಿನ ಸಮೀಪಿಸಿದೆ. ಸಿಎಂ ಸಿದ್ದರಾಮಯ್ಯ ಮೇಲೆ ಕಾಂಗ್ರೆಸ್ ಶಾಸಕರಿಗೂ ವಿಶ್ವಾಸ ಇಲ್ಲ.
ಶಾಸಕರ ವಿಶ್ವಾಸ ಕಳೆದುಕೊಂಡಿರುವ ಸಿದ್ದರಾಮಯ್ಯ ಸಿಎಂ ಸ್ಥಾನಕ್ಕೆ ರಾಜೀನಾಮೆ ಕೊಡುವುದು ನಿಶ್ಚಿತ ಎಂದರು.
ಸಿದ್ದರಾಮಯ್ಯ ಈ ಹಿಂದೆ ಮುಖ್ಯಮಂತ್ರಿ ಆಗಿದ್ದಾಗ ಮೈಸೂರು ಜಿಲ್ಲೆಯ ಅಭಿವೃದ್ಧಿಗಾಗಿ ಎಷ್ಟು ಅನುದಾ‌ನ ನೀಡಿದ್ದಾರೆ. ಈ ಬಗ್ಗೆ ಸಿದ್ದರಾಮಯ್ಯಗೆ ಸವಾಲು ಹಾಕುತ್ತಿದ್ದೇನೆ. ಐದು ವರ್ಷಗಳ ಅವಧಿಯಲ್ಲಿ ಮೈಸೂರಿಗೆ ‌ನೀಡಿರುವ ಅನುದಾನ ಎಷ್ಟು ಎಂಬುದನ್ನು ಅಂಕಿ ಅಂಶಗಳ ಸಮೇತ ಬಹಿರಂಗಪಡಿಸಲಿ ಎಂದು ಸವಾಲು ಹಾಕಿದರು.

ಶಿವಮೊಗ್ಗದಲ್ಲಿ ಗಲಾಟೆ ವಿಚಾರವಾಗಿ ಮೈಸೂರಿನಲ್ಲಿ ಬಿ ವೈ ವಿಜಯೇಂದ್ರ ಆಕ್ರೋಶ ವ್ಯಕ್ತಪಡಿಸಿದರು. ಇದು ರಾಜ್ಯದಲ್ಲಿ ನಿರಂತರವಾಗಿ ನಡೆಯುತ್ತಿದೆ. ಅಲ್ಪಸಂಖ್ಯಾತರನ್ನು ಓಲೈಕೆ ಮಾಡುತ್ತಿರುವುದು ಗಲಾಟೆಗೆ ಕಾರಣ. ಸಿದ್ದರಾಮಯ್ಯ ಸರ್ಕಾರ ಇದೆ ಏನು ಮಾಡಿದರೂ ನಡೆಯುತ್ತದೆ ಎಂದು‌ಕೊಂಡಿದ್ದಾರೆ. ಧೈರ್ಯದಿಂದ ಇಂತಹ ದುಸ್ಸಾಹಸಕ್ಕೆ ಕೈ ಹಾಕುತ್ತಿದ್ದಾರೆ. ಕೋಮು ಸೌಹರ್ಧತೆಯನ್ನು ಕಾಪಾಡಿಕೊಂಡು ಬಂದಿದ್ದೇವೆ.
ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹಾಳಾದರೆ ಇದಕ್ಕೆ ರಾಜ್ಯ ಸರ್ಕಾರವೇ ಹೊಣೆ ಎಂದರು.

Exit mobile version