Home ಅಪರಾಧ ಶುಲ್ಕಕ್ಕಾಗಿ ಶಾಲೆಯಲ್ಲಿ ಕಿರುಕುಳ, ಎಸ್ಎಸ್ಎಲ್ ಸಿ ವಿದ್ಯಾರ್ಥಿನಿ ಆತ್ಮಹತ್ಯೆ

ಶುಲ್ಕಕ್ಕಾಗಿ ಶಾಲೆಯಲ್ಲಿ ಕಿರುಕುಳ, ಎಸ್ಎಸ್ಎಲ್ ಸಿ ವಿದ್ಯಾರ್ಥಿನಿ ಆತ್ಮಹತ್ಯೆ

ಮಂಡ್ಯ : ಮಂಡ್ಯದಲ್ಲಿ ಘೋರ ಘಟನೆಯೊಂದು ನಡೆದಿದ್ದು, ಶಾಲಾ ಶುಲ್ಕ ಕಟ್ಟದ ಕಾರಣಕ್ಕೆ ಆಡಳಿತ ಮಂಡಳಿ ನೀಡಿದ ಕಿರುಕುಳದಿಂದ ಕಿರುಕುಳದಿಂದ ಬೇಸತ್ತ ಎಸ್‌ ಎಸ್‌ ಎಲ್ ಸಿ ವಿದ್ಯಾರ್ಥಿನಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.

ಮಂಡ್ಯ ಜಿಲ್ಲೆ ಮದ್ದೂರು ತಾಲೂಕಿನ ಹುಲಿಗೆರೆಪುರ ಗ್ರಾಮದಲ್ಲಿ ಶಾಲಾ ಶುಲ್ಕ ಕಟ್ಟದ ಕಾರಣಕ್ಕೆ ಆಡಳಿತ ಮಂಡಳಿ ನೀಡಿದ ಕಿರುಕುಳದಿಂದ ಬೇಸತ್ತ ವಿದ್ಯಾರ್ಥಿನಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.

ಅನಿಕೇತನ ವಿದ್ಯಾಸಂಸ್ಥೆಯಲ್ಲಿ ಎಸ್ ಎಸ್ ಎಲ್ ಸಿ ವ್ಯಾಸಂಗ ಮಾಡುತ್ತಿದ್ದ ಎಚ್.ಎಲ್.ಮಿಲನಾ (15) ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿನಿ. ಲಕ್ಷ್ಮಿ ಪ್ರಸಾದ್‌, ಎಚ್.ಎಸ್.ರಶ್ಮಿ ದಂಪತಿ ಪುತ್ರಿ, ಮಿಲನಾ ಶಿಕ್ಷಣ ಹಕ್ಕು ಕಾಯ್ದೆಯಡಿ ಶಾಲೆಗೆ ಆಯ್ಕೆ ಆಗಿದ್ದರೂ ಸಹ ಶಾಲೆ ಆಡಳಿತ ಮಂಡಳಿ, ಮುಖ್ಯಶಿಕ್ಷಕಿ ಶೈಲಜಾ ಸೇರಿದಂತೆ ಮೂವರು ಶಿಕ್ಷಕರು ಶಾಲಾ ಶುಲ್ಕ ಪಾವತಿ ಮಾಡುವಂತೆ ವಿದ್ಯಾರ್ಥಿನಿಗೆ ಒತ್ತಾಯಿಸಿ ಕಿರುಕುಳ ನೀಡುತ್ತಿದ್ದರು ಎನ್ನಲಾಗಿದೆ.

ಪ್ರಾರ್ಥನಾ ಸಮಯದಲ್ಲಿ ಭಾಗವಹಿಸಲು ಅವಕಾಶ ಕೊಡದೆ ಬಹಿಷ್ಕಾರ ಹಾಕಿದ್ದರು ಎನ್ನಲಾಗಿದೆ. ಶನಿವಾರ ಸಹ ಅವಕಾಶ ನೀಡಿರಲಿಲ್ಲ. ಮಿಲನಾ ಮಧ್ಯಾಹ್ನ ಶಾಲೆ ಬಿಟ್ಟು ಬಂದು ಮನೆಯಲ್ಲಿಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಪೋಷಕರು ದೂರಿದ್ದಾರೆ.

ಈ ಸಂಬಂಧ ಮದ್ದೂರು ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

Exit mobile version