ಹೊಸಪೇಟೆ: ವಿಜಯನಗರ ಜಿಲ್ಲಾ ಕ್ರೀಡಾಂಗಣದಲ್ಲಿ ಆಯೋಜನೆ ಸಮರ್ಪಣೆ ಸಂಕಲ್ಪ ಸಮಾವೇಶಕ್ಕೆ ಬಂದ ನಾಯಕರಿಗೆ ಭರ್ಜರಿ ಕಹಳೆ ಊದಿ, ನಗಾರಿ ಬಾರಿಸುವ ಮೂಲಕ ವೇದಿಕೆಗೆ ಸ್ವಾಗತಿಸಲಾಯಿತು.
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಲೋಕಸಭೆ ವಿಪಕ್ಷ ನಾಯಕ. ಮಲ್ಲಿಕಾರ್ಜುನ ಖರ್ಗೆ, ರಣದೀಪ್ ಸುರ್ಜೆವಾಲ ಹಾಗೂ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಅವರು ಆಗಮಿಸಿದರು. ರಾಜ್ಯ ಸರಕಾರದ ೧೩ಕ್ಕೂಹೆಚ್ಚು ಜನ ಸಚಿವರು, ೧೦೦ ಕ್ಕೂ ಹೆಚ್ಚು ಶಾಸಕರೂ ಭಾಗಿಯಾಗಿದ್ದಾರೆ. ಲಕ್ಷಾಂತರ ಸಂಖ್ಯೆಯಲ್ಲಿ ಜನ ಸೇರಿದ್ದು, ಕಾಂಗ್ರೆಸ್ ನಾಯಕರು ಆಗಮಿಸುತ್ತಿದ್ದಂತೆ ಕೇಕೆ, ಚಪ್ಪಾಳೆ ಮೂಲಕ ಸ್ವಾಗತಿಸಿದರು.