ಸಿಎಂ ಮನೆಗೆ ಬಿಜೆಪಿ ಮುತ್ತಿಗೆ ಯತ್ನ: ವಿಜಯೇಂದ್ರ ಪೊಲೀಸ್ ವಶಕ್ಕೆ

Advertisement

ಬೆಂಗಳೂರು: ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ 187 ಕೋಟಿಗಳ ಬೃಹತ್ ಹಗರಣ ಖಂಡಿಸಿ ಸಿಎಂ ಸಿದ್ದರಾಮಯ್ಯ ನಿವಾಸಕ್ಕೆ ಮುತ್ತಿಗೆ ಹಾಕಲು ಬಂದ ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಹಾಗೂ ವಿರೋಧ ಪಕ್ಷದ ನಾಯಕ ಆರ್ ಅಶೋಕ್ ಅವರನ್ನು ಪೊಲೀಸರು ಕುಮಾರ ಕೃಪಾ ಗೆಸ್ಟ್ ಹೌಸ್ ರಸ್ತೆಯಲ್ಲಿ ವಶಕ್ಕೆ ಪಡೆದುಕೊಂಡರು. ಈ ಕುರಿತಂತೆ ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿದ್ದು “ಭ್ರಷ್ಟ ಕಾಂಗ್ರೆಸ್ ಸರ್ಕಾರಕ್ಕೆ ಧಿಕ್ಕಾರ” ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ 187 ಕೋಟಿಗಳ ಬೃಹತ್ ಹಗರಣ ಖಂಡಿಸಿ ಜನವಿರೋಧಿ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಶಾಸಕರು ಹಾಗೂ ವಿಧಾನ ಪರಿಷತ್ ಸದಸ್ಯರುಗಳ ನೇತೃತ್ವದಲ್ಲಿ ಪ್ರತಿಭಟನೆ ನೆಡೆಸಿ ಮುಖ್ಯಮಂತ್ರಿಗಳ ನಿವಾಸಕ್ಕೆ ಮುತ್ತಿಗೆಗೆ ಯತ್ನಿಸಿ ಮುಖ್ಯಮಂತ್ರಿಗಳ ರಾಜೀನಾಮೆಗೆ ಆಗ್ರಹಿಸಲಾಯಿತು. ಎಸ್.ಟಿ ಸಮುದಾಯದ ಶ್ರೇಯೋಭಿವೃದ್ಧಿಗೆ ಮೀಸಲಿದ್ದ ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ 187 ಕೋಟಿ ರೂಗಳ ಭ್ರಷ್ಟಾಚಾರ, ಮೈಸೂರು ಮುಡಾ ಹಗರಣ ಸೇರಿದಂತೆ ಭ್ರಷ್ಟಾಚಾರದಲ್ಲಿ ಮುಳುಗಿ ಮತ್ತೊಂದೆಡೆ ರಾಜ್ಯದ ಬೊಕ್ಕಸವನ್ನೂ ಬರಿದು ಮಾಡಿಕೊಂಡು ಜನಸಾಮಾನ್ಯರ ಮೇಲೆ ದಿನಕ್ಕೊಂದು ಬೆಲೆ ಏರಿಕೆಯ ಬರೆ ಎಳೆಯುತ್ತಿರುವ ಜನ ವಿರೋಧಿ ರಾಜ್ಯ ಸರ್ಕಾರ ಕರ್ನಾಟಕ ಬಿಜೆಪಿ ಹೋರಾಟಕ್ಕೆ ಹೆದರಿ ಪ್ರತಿಭಟನೆ ಆರಂಭಕ್ಕೂ ಮುನ್ನವೇ ಪೊಲೀಸರ ಮೂಲಕ ಕಾಂಗ್ರೆಸ್ ಸರ್ಕಾರ ಬಂಧಿಸಿತು ಎಂದಿದ್ದಾರೆ.