Home ಕ್ರೀಡೆ ಸಿಎಂ ಸಿದ್ದರಾಮಯ್ಯರನ್ನು ಭೇಟಿಯಾದ ಜಾವೆಲಿನ್ ಎಸೆತಗಾರ ನೀರಜ್ ಚೋಪ್ರಾ

ಸಿಎಂ ಸಿದ್ದರಾಮಯ್ಯರನ್ನು ಭೇಟಿಯಾದ ಜಾವೆಲಿನ್ ಎಸೆತಗಾರ ನೀರಜ್ ಚೋಪ್ರಾ

ಬೆಂಗಳೂರು : ಖ್ಯಾತ ಜಾವೆಲಿನ್ ಎಸೆತಗಾರ ನೀರಜ್ ಚೋಪ್ರಾ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಕಾವೇರಿ ನಿವಾಸದಲ್ಲಿ ಭೇಟಿ ಮಾಡಿದ್ದಾರೆ.
ಈ ಕುರಿತಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿದ್ದಾರೆ ಅವಳಿ ಒಲಿಂಪಿಕ್ಸ್ ಪದಕ ವಿಜೇತ, ವಿಶ್ವಶ್ರೇಷ್ಠ ಜಾವೆಲಿನ್ ಎಸೆತಗಾರರಾದ ನೀರಜ್ ಚೋಪ್ರಾ ಇಂದು ಸೌಹಾರ್ದಯುತವಾಗಿ ಭೇಟಿ ಮಾಡಿದರು. ಈ ವೇಳೆ ನೀರಜ್ ಚೋಪ್ರಾ ಅವರ ಕ್ರೀಡಾ ಬದುಕು ಮತ್ತಷ್ಟು ಯಶಸ್ಸಿನಿಂದ ಕೂಡಿರಲಿ ಎಂದು ಶುಭ ಹಾರೈಸಿದ್ದಾರೆ, ಈ ಸಂದರ್ಭದಲ್ಲಿ ಒಲಂಪಿಕ್ ಅಸೋಸಿಯೇಷನ್ ಅಧ್ಯಕ್ಷರಾದ ವಿಧಾನ‌ ಪರಿಷತ್ ಸದಸ್ಯ ಗೋವಿಂದರಾಜು ಅವರು ಉಪಸ್ಥಿತರಿದ್ದರು. ಜುಲೈ 5ರಂದು ನಡೆಯಲಿರುವ ಜಾಗತಿಕ ಮಟ್ಟದ ನೀರಜ್‌ ಚೋಪ್ರಾ ಕ್ಲಾಸಿಕ್‌ ಸ್ಪರ್ಧೆಗೆ ಕಂಠೀರವ ಕ್ರೀಡಾಂಗಣ ಆತಿಥ್ಯ ವಹಿಸಿದೆ. ಕಿಯೊ ಒಲಿಂಪಿಕ್ಸ್‌ ಚಾಂಪಿಯನ್‌ ನೀರಜ್‌ ಜತೆಗೆ ಅಂತಾರಾಷ್ಟ್ರೀಯ ತಾರೆಗಳಾದ ಜೂಲಿಯಸ್‌ ಯೆಗೊ ಮತ್ತು ಥಾಮಸ್‌ ರೋಹ್ಲರ್‌ ಸ್ಪರ್ಧೆಯಲ್ಲಿರುವ ಪ್ರಧಾನ ಆಕರ್ಷಣೆಯಾಗಿದ್ದಾರೆ. ಆದರೆ ಗಾಯದ ಸಮಸ್ಯೆಯಿಂದಾಗಿ ಆ್ಯಂಡರ್ಸನ್‌ ಪೀಟರ್‌ ಹಿಂದೆ ಸರಿದಿದ್ದಾರೆ.

Exit mobile version