ರಾಯಚೂರು(ಜಾಲಹಳ್ಳಿ): ಸಿಡಿಲು ಬಡಿದು ಮಹಿಳೆಯೊಬ್ಬಳು ಮೃತಪಟ್ಟ ಘಟನೆ ಮಂಗಳವಾರ ಸಂಜೆ ಇಲ್ಲಿನ ಸಮೀಪದ ಲಿಂಗದಹಳ್ಳಿ ಗ್ರಾಮದಲ್ಲಿ ನಡೆದಿದೆ.
ಲಿಂಗದಹಳ್ಳಿ ಗ್ರಾಮದ ನಿವಾಸಿ ದೇವಕಿ ಮ್ಯಾಗೇರಿ (40) ಮೃತಪಟ್ಟ ಮಹಿಳೆ ಎಂದು ಗುರುತಿಸಲಾಗಿದೆ.
ಮೊಬೈಲ್‌ನಲ್ಲಿ ಮಾತನಾಡುತ್ತಾ ಹೋಗುತ್ತಿದ್ದ ವೇಳೆಯಲ್ಲಿ ಸಿಡಿಲು ಬಡಿದಿದೆ ಎಂದು ತಿಳಿದು ಬಂದಿದೆ. ಮೃತ ಮಹಿಳೆಗೆ ಪತಿ, ಇಬ್ಬರು ಮಕ್ಕಳಿದ್ದಾರೆ.