ಸಿ.ಐ. ಮುನವಳ್ಳಿ ಪಾಲಿಟೆಕ್ನಿಕ್‌ನಲ್ಲಿ ಬ್ಯಾಕ್ ಟು ಕ್ಯಾಂಪಸ್ ವಿಶೇಷ ಕಾರ್ಯಕ್ರಮ

ಹುಬ್ಬಳ್ಳಿ: ವಿದ್ಯಾನಗರದ ಕೆಎಲ್‌ಇ ಸಂಸ್ಥೆಯ ಸಿ.ಐ. ಮುನವಳ್ಳಿ ಪಾಲಿಟೆಕ್ನಿಕ್ ಕಾಲೇಜಿನ ಹಳೆಯ ವಿದ್ಯಾರ್ಥಿಗಳ ಸಂಘದ ವತಿಯಿಂದ ಮೇ 25ರಂದು ಗುರುವಂದನೆ ಮತ್ತು ಬ್ಯಾಕ್ ಟು ಕ್ಯಾಂಪಸ್ ವಿಶೇಷ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ಕಾರ್ಯಕ್ರಮದಲ್ಲಿ 1996ರ ಬಳಿಕ ಇಲ್ಲಿಯವರೆಗೆ ಕಲಿತಿರುವ ಎಲ್ಲ ಹಳೆಯ ವಿದ್ಯಾರ್ಥಿಗಳು ಭಾಗವಹಿಸಬಹುದಾಗಿದೆ. ಮೇ 25ರಂದು ಗುರುವಂದನೆ ಕಾರ್ಯಕ್ರಮದ ಬಳಿಕ ಸಾಂಸ್ಕೃತಿಕ ಕಾರ್ಯಕ್ರಮ ಆಯೋಜಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ ನಿಖಿಲೇಶ ಕುಂದಗೋಳ ಮೊ. 9845892794, 9019214001 ಸಂಪರ್ಕಿಸಬಹುದು ಎಂದು ಕಾಲೇಜಿನ ಪ್ರಾಂಶುಪಾಲರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.