ಹಿರಿಯೂರು: ಇಲ್ಲಿನ ಜವಗೊಂಡನಹಳ್ಳಿ ಬಳಿ ಶುಕ್ರವಾರ ರಾತ್ರಿ ಸಂಭವಿಸಿದ ಅಪಘಾತದಲ್ಲಿ ಉಪ ಸಭಾಪತಿ ರುದ್ರಪ್ಪ ಲಮಾಣಿ ಅವರು ಗಾಯಗೊಂಡಿದ್ದಾರೆ. ಬೆಂಗಳೂರಿನಿಂದ ಹಾವೇರಿಗೆ ತೆರಳುತ್ತಿದ್ದ ಮಾರ್ಗ ಮಧ್ಯೆ ರಾ.ಹೆ ೪೮ರಲ್ಲಿ ಕಾರಿಂದ ಕೆಳಗಿಳಿದು ನಿಂತಿದ್ದ ರುದ್ರಪ್ಪ ಲಮಾಣಿ ಅವರಿಗೆ ಬೈಕ್ ಹೊಡೆದಿದೆ. ನೆಲಕ್ಕೆ ಬಿದ್ದ ಉಪಸಭಾಪತಿ ರುದ್ರಪ್ಪ ಲಮಾಣಿ ಹಣೆ, ಹಲ್ಲು ಮತ್ತು ಬಲ ಮೊಣಕಾಲಿಗೆ ಗಾಯವಾಗಿದೆ. ಹಿರಿಯೂರಲ್ಲಿ ಚಿಕಿತ್ಸೆ ಪಡೆದು ದಾವಣಗೆರೆ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಹಿರಿಯೂರು ಗ್ರಾಮಾಂತರ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.