ಸಂ. ಕ. ಸಮಾಚಾರ, ಮಂಗಳೂರು: ಕಾರೊಂದು ಮಗುಚಿ ಯುವ ವೈದ್ಯರೊಬ್ಬರು ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ ೬೬ರ ನಂತೂರು-ಪಂಪ್‌ವೆಲ್ ನಡುವೆ ಜೂ.೧೬ರ ಸೋಮವಾರ ತಡರಾತ್ರಿ ನಡೆದಿದೆ.
ಕೇರಳದ ಆಳಪ್ಪುಝ ನಿವಾಸಿ, ದೇರಳಕಟ್ಟೆಯ ಖಾಸಗಿ ಮೆಡಿಕಲ್ ಕಾಲೇಜಿನಲ್ಲಿ ವಿದ್ಯಾಭ್ಯಾಸ ಮುಗಿಸಿ ಅಲ್ಲಿಯೇ ಫಿಸಿಯೋಥೆರಪಿ ವಿಭಾಗದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಡಾ| ಮೊಹಮ್ಮದ್ ಅಮಲ್ (೨೯) ಮೃತಪಟ್ಟವರು.
ನಂತೂರಿನ ತಾರೆತೋಟ ಬಳಿ ಘಟನೆ ನಡೆದಿದ್ದು, ರಾತ್ರಿ ಮಳೆ ಬರುತ್ತಿದ್ದ ಸಂದರ್ಭ ನಿಯಂತ್ರಣ ತಪ್ಪಿದ ಕಾರು ಸ್ಕಿಡ್ ಆಗಿ ಡಿವೈಡರ್‌ಗೆ ಬಡಿದು ಬಳಿಕ ಮೂರು ಪಲ್ಟಿಯಾಗಿದೆ. ಗಂಭೀರ ಗಾಯಗೊಂಡ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಈ ವೇಳೆ ಅವರು ಮೃತಪಟ್ಟಿದ್ದರು. ಕಾರಿನಲ್ಲಿದ್ದ ಕೇರಳ ಮೂಲದ ವೈದ್ಯ ವಿದ್ಯಾರ್ಥಿನಿ ಗಾಯಗೊಂಡಿದ್ದಾಳೆ. ಘಟನೆ ವೇಳೆ ಹಿಂದಿನಿಂದ ಬರುತ್ತಿದ್ದ ಲೋಡ್ ತುಂಬಿದ ಲಾರಿಯೊಂದರ ಚಾಲಕ ಹಠಾತ್ ಬ್ರೇಕ್ ಹಾಕಿದಾಗ ರಸ್ತೆಯಲ್ಲೇ ಪಲ್ಟಿಯಾಗಿದೆ. ಕದ್ರಿ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.