Home News ಆಸ್ಪತ್ರೆಗೆ ದಾಖಲಾಗಿದ್ದ ವೃದ್ಧ ಮಹಿಳೆಯ ಅತ್ಯಾಚಾರ: ನಾಗರೀಕ ಸಮಾಜ ತಲೆ ತಗ್ಗಿಸುವ ಘಟನೆ

ಆಸ್ಪತ್ರೆಗೆ ದಾಖಲಾಗಿದ್ದ ವೃದ್ಧ ಮಹಿಳೆಯ ಅತ್ಯಾಚಾರ: ನಾಗರೀಕ ಸಮಾಜ ತಲೆ ತಗ್ಗಿಸುವ ಘಟನೆ

ಚಿಕ್ಕಬಳ್ಳಾಪುರ: ಸಾರ್ವಜನಿಕ ಆಸ್ಪತ್ರೆ ಆವರಣದಲ್ಲೇ ವೃದ್ಧೆಯೋರ್ವರ ಮೇಲೆ ಅತ್ಯಾಚಾರ ನಡೆದಿರುವ ಪೈಶಾಚಿಕ ಕೃತ್ಯ ನಾಗರೀಕ ಸಮಾಜ ತಲೆ ತಗ್ಗಿಸುವ ಘಟನೆಯಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಖಂಡಿಸಿದ್ದಾರೆ.

ಆರೋಗ್ಯ ಹಬ್ಬದ ಕುರಿತು ಗಣ್ಯರ ಮಾತು


ಈ ಕುರಿತಂತೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿದ್ದು ಜನವಿರೋಧಿ ಭ್ರಷ್ಟ ಕಾಂಗ್ರೆಸ್ ಸರ್ಕಾರದ ಆಡಳಿತದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಕುಸಿತ ಕಂಡಿದೆ. ನಿರಂತರ ಮಹಿಳಾ ದೌರ್ಜನ್ಯ, ಅತ್ಯಾಚಾರ ಪ್ರಕರಣಗಳು ವರದಿಯಾಗುತ್ತಿರುವ ಬೆನ್ನಲ್ಲೇ ಚಿಂತಾಮಣಿ ತಾಲ್ಲೂಕಿನ ಸಾರ್ವಜನಿಕ ಆಸ್ಪತ್ರೆ ಆವರಣದಲ್ಲೇ ವೃದ್ಧೆಯೋರ್ವರ ಮೇಲೆ ಅತ್ಯಾಚಾರ ನಡೆದಿರುವ ಪೈಶಾಚಿಕ ಕೃತ್ಯ ನಾಗರೀಕ ಸಮಾಜ ತಲೆ ತಗ್ಗಿಸುವ ಘಟನೆಯಾಗಿದೆ. ಕಾಂಗ್ರೆಸ್ ಸರ್ಕಾರದಲ್ಲಿ ಕ್ರಮಿನಲ್ ಗಳಿಗೆ ಕಾನೂನಿನ ಭಯವಿಲ್ಲದಂತಾಗಿದೆ, 24 ವರ್ಷದ ಇರ್ಫಾನ್ ಎಂಬ ಕ್ರೂರಿ ಈ ಕೃತ್ಯ ಎಸಗಿದ್ದಾನೆ ಎಂಬುದು ಬಯಲಾಗಿದೆ. ಭಿಕ್ಷುಕರು ನಿರಾಶ್ರಿತರನ್ನೂ ಬಿಡದ ಈ ಕಾಮುಕನನ್ನು ತಕ್ಷಣ ಬಂಧಿಸಿ ಕಠಿಣ ಕ್ರಮ ಕೈಗೊಳ್ಳಬೇಕು ಹಾಗೂ ಇಂತಹ ದುಷ್ಕರ್ಮಿಗಳಿಗೆ ಬಾಲ ಬಿಚ್ಚದಿರುವಂತೆ ಪೊಲೀಸ್ ಇಲಾಖೆ ಸರ್ಕಾರದ ಮುಲಾಜಿಗೆ ಒಳಗಾಗದೇ ಕಾನೂನು ಕುಣಿಕೆ ಬಿಗಿಗೊಳಿಸಲಿ ಎಂದಿದ್ದಾರೆ.

ಘಟನೆ: ಸರ್ಕಾರಿ ಆಸ್ಪತ್ರೆಯಲ್ಲಿ ದಾಖಲಾಗಿದ್ದ ವೃದ್ಧ ಮಹಿಳೆಯ ಮೇಲೆ ಕಾಮುಕನೊಬ್ಬ ಅತ್ಯಾಚಾರವೆಸಗಿದ ಘಟನೆ ಚಿಂತಾಮಣಿ ನಗರದಲ್ಲಿ ನಡೆದಿದೆ. ಇರ್ಫಾನ್ (24) ಎಂಬ ಕಾಮುಕನೇ ವೃದ್ಧೆಯ ಅತ್ಯಾಚಾರ ಮಾಡಿದ್ದಾನೆ. ಆಸ್ಪತ್ರೆಯಲ್ಲಿ ಚಿಕಿತ್ಸೆಗೆಂದು ಆಸ್ಪತ್ರೆಗೆ ದಾಖಲಾಗಿ ವೃದ್ಧ ಮಹಿಳೆಯ ಅತ್ಯಾಚಾರ ನಡೆಸಿದ್ದಾನೆ. ಚಿಂತಾಮಣಿ ಸರ್ಕಾರಿ ಆಸ್ಪತ್ರೆ ವೈದ್ಯಾಧಿಕಾರಿಳೇ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಆರೋಪಿ ಇರ್ಫಾನ್‌ನನ್ನು ಪೊಲೀಸರು ಬಂಧಿಸಿದ್ದಾರೆ. ಈ ಸಂಬಂಧ ಚಿಂತಾಮಣಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Exit mobile version