ಮೂರು ದಿನಗಳ ಕಾಲ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ
ಹೊಸಪೇಟೆ: ವಿಶ್ವವಿಖ್ಯಾತ ಹಂಪಿ ಉತ್ಸವಕ್ಕೆ ಸಕಲ ಸಿದ್ಧತೆ ಗೊಂಡಿದ್ದು, ಎಂ.ಪಿ.ಪ್ರಕಾಶ್ ನಗರದ ಬಳಿಯಲ್ಲಿ ನಿರ್ಮಾಣ ಗೊಂಡಿರುವ ಗಾಯಿತ್ರಿ ಪೀಠದ (ಎಂ.ಪಿ.ಪ್ರಕಾಶ) ಮುಖ್ಯವೇದಿಕೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಸಂಜೆ ೬ಕ್ಕೆ ವಿದ್ಯಕ್ತವಾಗಿ ಉತ್ಸವಕ್ಕೆ ಚಾಲನೆ ನೀಡಲಿದ್ದಾರೆ.
ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಬಿ.ಜೆಡ್.ಜಮೀರ್‌ಅಹ್ಮದ್‌ಖಾನ್, ಸಾರಿಗೆ ಸಚಿವ ರಾಮಲಿಂಗಾರೆಡ್ಡಿ, ಕಾನೂನು ಸಂಸದೀಯ ವ್ಯವಹಾರಗಳು ಹಾಗೂ ಪ್ರವಾಸೋದ್ಯಮ ಸಚಿವ ಹೆಚ್.ಕೆ. ಪಾಟೀಲ್, ಕನ್ನಡ ಮತ್ತು ಸಂಸೃತಿ ಸಚಿವ ಶಿವರಾಜ್ ತಂಗಡಿಗೆ ಶಾಸಕ ಹೆಚ್.ಆರ್.ಗವಿಯಪ್ಪ ಸೇರಿದಂತೆ ಸೇರಿದಂತ ಇತರರು ಭಾಗವಹಿಲಿದ್ದಾರೆ.
ಈ ಬಾರಿ ಆರು ವೇದಿಕೆಗಳನ್ನು ನಿರ್ಮಾಣ ಮಾಡಲಾಗಿದ್ದು, ಗಾಯತ್ರಿಪೀಠದ ವೇದಿಕೆ, ಎದುರು ಬಸವಣ್ಣ ಮಂಟಪ, ವಿರೂಪಾಕ್ಷೇಶ್ವರ ಹಾಗೂ ಸಾಸವೆಕಾಳು ಗಣಪತಿ,ಮಹನವಮಿ ದಿಬ್ಬ, ಧ್ವನಿ ಮತ್ತು ಬಳಕು ಸೇರಿದಂತೆ ಒಟ್ಟು ಆರು ವೇದಿಕೆಗಳಲ್ಲಿ ಮೂರು ದಿನಗಳ ಕಾಲ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು, ಕಲಾ ಪ್ರದರ್ಶನಗಳು, ಸಮಾರಂಭಗಳು ನಡೆಯಲಿವೆ.
ಮೂರು ದಿನಗಳ ಕಾಲ ನಡೆಯಲಿರುವ ಹಂಪಿ ಉತ್ಸವದಲ್ಲಿ ನಾಡಿನ ಹೆಸರಾಂತ ಚಲನಚಿತ್ರ ನಟ ನಟಿಯರು ಭಾಗವಹಿಸುತ್ತಿದ್ದಾರೆ. ಜೊತೆಗೆ ಖ್ಯಾತ ಸಂಗೀತ ನಿರ್ದೇಶಕರು ಹಾಗೂ ಹಿನ್ನಲೆಗಾಯಕರು ರಸಮಂಜರಿ ಮತ್ತು ಸಂಗೀತಕಾರ್ಯಕ್ರಮ ನಡೆಸಿಕೊಡುವರು.