Home News ಎಕ್ಸಪ್ರೆಸ್ ಕಾರಿಡಾರ್‌ನಲ್ಲಿ ಚನ್ನಪಟ್ಟಣದ Toys Park

ಎಕ್ಸಪ್ರೆಸ್ ಕಾರಿಡಾರ್‌ನಲ್ಲಿ ಚನ್ನಪಟ್ಟಣದ Toys Park

ಬೆಂಗಳೂರು: “ಚನ್ನಪಟ್ಟಣ ಬೊಂಬೆಗಳನ್ನು” ಉತ್ತೇಜಿಸುವ ನಿಟ್ಟಿನಲ್ಲಿ Toys Park ನಿರ್ಮಿಸಿ ಸ್ಥಳೀಯವಾಗಿ ಬೊಂಬೆ ತಯಾರಿಕರಿಗೆ ಮತ್ತು ಪ್ರವಾಸಿಗರಿಗೆ ಅನುವು ಮಾಡಿಕೊಡುವಂತೆ ದೆಹಲಿಯಲ್ಲಿ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರನ್ನು ಬೆಂಗಳೂರು ಗ್ರಾಮಾಂತರ ಸಂಸದ ಡಾ.ಸಿ.ಎನ್ ಮಂಜುನಾಥ್ ಮನವಿ ಮಾಡಿದ್ದಾರೆ.
ಈ ಕುರಿತಂತೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿ ಬೆಂಗಳೂರು ಮೈಸೂರು ಎಕ್ಸಪ್ರೆಸ್ ಕಾರಿಡಾರ್ ಅಲ್ಲಿ “ಚನ್ನಪಟ್ಟಣ ಬೊಂಬೆಗಳನ್ನು” ಉತ್ತೇಜಿಸುವ ನಿಟ್ಟಿನಲ್ಲಿ Toys Park ನಿರ್ಮಿಸಿ ಸ್ಥಳೀಯವಾಗಿ ಬೊಂಬೆ ತಯಾರಿಕರಿಗೆ ಮತ್ತು ಪ್ರವಾಸಿಗರಿಗೆ ಅನುವು ಮಾಡಿಕೊಡುವಂತೆ ಮನವಿ ಮಾಡಲಾಗಿದೆ.

ಚನ್ನಪಟ್ಟಣದ ಬೊಂಬೆಗಳಿಗೆ ಐತಿಹಾಸಿಕ ಹಿನ್ನಲೆಯಿದ್ದು, ಬೊಂಬೆಗಳ ನಾಡು ಎಂದೇ ಪ್ರಸಿದ್ಧವಾಗಿದೆ. ಸಾವಿರಾರು ಕುಟುಂಬಗಳು ಪ್ರತ್ಯಕ್ಷವಾಗಿ ಮತ್ತು ಪರೋಕ್ಷವಾಗಿ ಬೊಂಬೆ ಉದ್ಯಮದ ಮೇಲೆ ಅವಲಂಬಿತವಾಗಿವೆ, ಬೆಂಗಳೂರು-ಮೈಸೂರು ಎಕ್ಸಪ್ರೆಸ್ ಕಾರಿಡಾರ್ ನಿರ್ಮಾಣದ ನಂತರ ಚನ್ನಪಟ್ಟಣ ನಗರಕ್ಕೆ ಆಗಮಿಸುವ ಪ್ರಯಾಣಿಸುವವರ ಸಂಖ್ಯೆ ಗಣನೀಯವಾಗಿ ಕಡಿಮೆಯಾಗಿದೆ. ಇದರಿಂದಾಗಿ ಈ ಉದ್ಯಮದ ಮೇಲೆ ಅವಲಂಬಿತರಾಗಿರುವವರ ಸ್ಥಿತಿ ಶೋಚನೀಯವಾಗಿದೆ.

ಈ ಹಿನ್ನಲೆ ಎಕ್ಸಪ್ರೆಸ್ ಕಾರಿಡಾರ್ ನಲ್ಲಿ ಚನ್ನಪಟ್ಟಣ ಸಮೀಪ Toys Park ನಿರ್ಮಿಸುವುದರಿಂದ ಸ್ಥಳೀಯವಾಗಿ ಬೊಂಬೆ ತಯಾರಿಕೆಯ ಮೇಲೆ ಅವಲಂಬಿತರಾಗಿರುವವರಿಗೆ ವೇದಿಕೆ ಕಲ್ಪಿಸಿದಂತಾಗುತ್ತದೆ ಮತ್ತು ಬೊಂಬೆಗಳ ನಾಡು ಎಂಬ ಚನ್ನಪಟ್ಟಣದ ಹಿರಿಮೆಯನ್ನು ಹೆಚ್ಚಿಸದಂತಾಗುತ್ತದೆ.

ಈ ವಿಷಯವಾಗಿ ಮಾನ್ಯ ಸಚಿವರು ಸಕಾರಾತ್ಮಕವಾಗಿ ಸ್ಪಂದಿಸಿದ್ದು ಆದಷ್ಟು ಬೇಗ ಮಾಡಿಕೊಡುವ ಬಗ್ಗೆ ಭರವಸೆ ನೀಡಿರುತ್ತಾರೆ ಎಂದಿದ್ದಾರೆ.

Exit mobile version