ಎಪಿಎಂಸಿಗೆ ಉಪ ಲೋಕಾಯುಕ್ತರ ದಿಢೀರ್ ಭೇಟಿ

ಹಾವೇರಿ: ಕರ್ನಾಟಕ ಉಪಲೋಕಾಯುಕ್ತ ಬಿ. ವೀರಪ್ಪ ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿದ್ದು, ಬುಧವಾರ ಬೆಳಗ್ಗೆ ಎಪಿಎಂಸಿ ಕಚೇರಿ, ಎಂಪಿಎಂಸಿ ತರಕಾರಿ ಮಾರುಕಟ್ಟೆಗೆ ದಿಢೀರ್ ಭೇಟಿ ನೀಡಿ ಪರಿಶೀಲಿಸಿದರು.

ತರಕಾರಿ ಮಾರುಕಟ್ಟೆಯಲ್ಲಿನ ಅವ್ಯವಸ್ಥೆ, ಸ್ವಚ್ಛತೆ, ತೂಕ, ತೂಕದ ಯಂತ್ರಗಳನ್ನು ಪರಿಶೀಲಿಸಿದರು. ವ್ಯಾಪಾರಸ್ಥರು ತೂಕದಲ್ಲಿ ಮೋಸ ಮಾಡಿ ರೈತರಿಗೆ ವಂಚನೆ ಮಾಡುತ್ತಿರುವುದನ್ನು ಪತ್ತೆ ಹಚ್ಚಿದರು.

ನೀವು ಯಾವತ್ತೂ ಬೆಳಗ್ಗೆ ಎದ್ದು ಮಾರುಕಟ್ಟೆಗೆ ಬಂದು ನೋಡಿಲ್ಲ ಎಂದು ಎಪಿಎಂಸಿ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು.