ತುಮಕೂರು: ಎಸ್ಸಿಪಿ-ಟಿಎಸ್ಪಿ ಅನುದಾನ ಅನ್ಯ ಯೋಜನೆಗಳಿಗೆ ಬಳಕೆ ಮಾಡಿಕೊಳ್ಳುತ್ತಿದೆ ಎಂದು ವಿಧಾನಸಭೆ ವಿರೋಧ ಪಕ್ಷದ ಉಪ ನಾಯಕ ಅರವಿಂದ ಬೆಲ್ಲದ ತುಮಕೂರಿನಲ್ಲಿಂದು ಹೇಳಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ ರಾಜ್ಯದಲ್ಲಿ ಪರಿಶಿಷ್ಟ ಸಮುದಾಯಕ್ಕೆ ಮೀಸಲಿಟ್ಟ SCP- TSP ಅನುದಾನವನ್ನು, ರಾಜ್ಯ ಸರ್ಕಾರ ಖಾತರಿ ಯೋಜನೆಗಳಿಗೆ ಬಳಸಿಕೊಳ್ಳುತ್ತಿದೆ. ಇದರಿಂದಾಗಿ ಈ ಸಮುದಾಯದ ಅಭಿವೃದ್ಧಿಯನ್ನು ಕಡೆಗಣಿಸಿದೆ, ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಸ್ತಿತ್ವಕ್ಕೆ ಬಂದ ನಂತರ ಕಳೆದೆರಡು ವರ್ಷಗಳ ಅವಧಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪರಿಶಿಷ್ಟ ಸಮುದಾಯದ ಕಲ್ಯಾಣಕ್ಕಾಗಿ ಮೀಸಲಿಟ್ಟ ಅನುದಾನವನ್ನು ಖಾತರಿ ಯೋಜನೆಗಳು ಸೇರಿದಂತೆ ಅನ್ಯ ಯೋಜನೆಗಳಿಗೆ ಬಳಸಿಕೊಳ್ಳುತ್ತಿದ್ದಾರೆ. ಇದರಿಂದ ಈ ಸಮುದಾಯಕ್ಕೆ ಮೀಸಲಿಟ್ಟ ಅನುದಾನ ಸಮರ್ಪಕವಾಗಿ ಬಳಕೆ ಮಾಡಿಕೊಳ್ಳಲು ಸಾಧ್ಯವಾಗಿಲ್ಲ ಎಂದರು.