ಬೆಂಗಳೂರು: ಬೆಳಗಾವಿ ವಿಧಾನಮಂಡಲ ಅಧಿವೇಶನದ ವೇಳೆ ವಿಧಾನ ಪರಿಷತ್ತಿನಲ್ಲಿ ನಡೆದ ಘಟನೆಗೆ ಸಂಬಂಧಿಸಿದಂತೆ ರಾಜಕೀಯ ಒತ್ತಡದ ಕಾರಣಕ್ಕೆ ಕಾನೂನುಬಾಹಿರವಾಗಿ ಎಫ್‌ಐಆರ್ ದಾಖಲಿಸಲಾಗಿದೆ ಎಂದು ವಿಧಾನಪರಿಷತ್ ಸದಸ್ಯ ಸಿ.ಟಿ.ರವಿ ಅವರು ರಾಜ್ಯ ಪೊಲೀಸ್ ಮಹಾನಿರ್ದೇಶಕ ಅಲೋಕ್ ಮೋಹನ್ ಅವರನ್ನು ಭೇಟಿಯಾಗಿ ದೂರು ನೀಡಿದ್ದಾರೆ, ನನ್ನನ್ನು ಅಕ್ರಮವಾಗಿ ಬಂಧಿಸಿ, ದೂರುಕೊಟ್ಟ ಬಳಿಕವೂ ಎಫ್ ಐ ಆರ್ ಹಾಕದೆ ನನ್ನ ಮೇಲೆ ದೌರ್ಜನ್ಯವೆಸಗಿ, ಕೆಲವು ಪ್ರಭಾವಿ ವ್ಯಕ್ತಿಗಳ ನಿದರ್ಶನದಂತೆ ರಾತ್ರಿ ಇಡೀ ನಿರ್ಜನ ಪ್ರದೇಶಗಳಲ್ಲಿ ಸುತ್ತಾಡಿಸಿ, ಸಂಪೂರ್ಣವಾಗಿ ಕಾನೂನಿನ ಉಲ್ಲಂಘನೆ ಮಾಡಿದ ಪೊಲೀಸ್ ಇಲಾಖೆಯ ಅಧಿಕಾರಿಗಳ ಮೇಲೆ ಸೂಕ್ತ ಕ್ರಮಕೈಗೊಳ್ಳುವಂತೆ ರಾಜ್ಯ ಪೊಲೀಸ್ ಮಹಾನಿರ್ದೇಶಕರಾದ ಶ್ರೀ ಅಲೋಕ್ ಮೋಹನ್ ಅವರಿಗೆ ಕರ್ನಾಟಕ ಬಿಜೆಪಿ ನಿಯೋಗದೊಂದಿಗೆ ತೆರಳಿ ದೂರು ನೀಡಿದ್ದಾರೆ.