ಕಾಫಿನಾಡಿನಲ್ಲಿ ಮೊದಲ ಕೊರೊನಾ ಪ್ರಕರಣ

ಚಿಕ್ಕಮಗಳೂರು: ಕಾಫಿನಾಡಿನಲ್ಲಿ ೨೪ ವರ್ಷದ ಯುವಕನಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಈ ವ್ಯಕ್ತಿಯಿಂದ ಸ್ಯಾಂಪಲ್ ಸಂಗ್ರಹಿಸಿ ಹಾಸನದ ಪ್ರಾಯೋಗಾಲಯಕ್ಕೆ ಕಳುಹಿಸಿಕೊಡಲಾಗಿತ್ತು. ಆರೋಗ್ಯ ಇಲಾಖೆಯ ಹೆಲ್ತ್ ಬುಲೆಟಿನ್‌ನಲ್ಲಿ ಕೊರೊನಾ ಪಾಸಿಟಿವ್ ದೃಢಪಟ್ಟಿದೆ.
ಕೇರಳದ ಕೊಚ್ಚಿಯಲ್ಲಿ ಕೆಲಸ ಮಾಡುತ್ತಿದ್ದ ೨೨ ವರ್ಷದ ಯುವಕ ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ರಜೆ ಹಿನ್ನೆಲೆಯಲ್ಲಿ ಚಿಕ್ಕಮಗಳೂರಿಗೆ ಆಗಮಿಸಿದ್ದ ಯುವಕ ನಗರದ ನಿವಾಸಿ ಹೆಚ್ಚಿನ ಚಿಕಿತ್ಸೆ ಖಾಸಗಿ ಆಸ್ಪತ್ರೆಯಲ್ಲಿ ಪಡೆಯುತ್ತಿದ್ದಾನೆ
ಜಿಲ್ಲೆಯಲ್ಲಿ ಮೊದಲ ಕೊರೊನಾ ಪ್ರಕರಣ ದೃಢ ಪಟ್ಟಿರುವ ಹಿನ್ನಲೆಯಲ್ಲಿ ಆರೋಗ್ಯ ಇಲಾಖೆ ಎಚ್ಚರಿಕೆ ವಹಿಸಿದ್ದು, ಕಾಫಿನಾಡಿನಲ್ಲಿ ಕೋವಿಡ್ ಪ್ರಕರಣಗಳು ಗಣನೀಯ ಪ್ರಮಾಣದಲ್ಲಿ ಇಳಿಕೆಯಾದ ಹಿನ್ನೆಲೆಯಲ್ಲಿ ಕಳೆದ ಮೂರು ವರ್ಷದಿಂದ ಆರ್‌ಟಿಪಿಸಿಆರ್ ಕೋವಿಡ್ ಪರೀಕ್ಷೆಯನ್ನು ಸ್ಥಗಿತಗೊಳಿಸಲಾಗಿತ್ತು.