ಖ್ಯಾತ ನಿರೂಪಕಿ ಅಪರ್ಣ ಸಹೋದರ ಚೈತನ್ಯ ನಿಧನ

ಬೆಂಗಳೂರು: ಇತ್ತೀಚೆಗೆ ನಿಧನರಾದ ಖ್ಯಾತ ನಿರೂಪಕಿ ಅಪರ್ಣ ಅವರ ಸಹೋದರ ಚೈತನ್ಯ ನಿಧನರಾಗಿದ್ದಾರೆ.
ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ವಿಚಾರವನ್ನು ಅಪರ್ಣಾ ಅವರ ಪತಿ ನಾಗರಾಜ್ ರಾಮಸ್ವಾಮಿ ವಸ್ತಾರೆ ಹಂಚಿಕೊಂಡಿದ್ದಾರೆ.
“ಕೆಲವು ಹೂವುಗಳು ಅರಳದೆ ಮೊಗ್ಗಾಗಿಯೇ ಉದುರಿಹೋಗುತ್ತವೆ. ಇನ್ನು ಕೆಲವು ಅರಳಿ ಹಣ್ಣಾಗದೆ ಕಮರುತ್ತವೆ. ಇನ್ನೂ ಕೆಲವನ್ನು ಒತ್ತಾಯದಿಂದ ಕೊಯ್ದು ಕತ್ತರಿಸಲಾಗುತ್ತದೆ. ಯಾರು ಯಾವುದೆಂದು ನಾನು ಈವರೆಗೂ ಅರಿತಿಲ್ಲ. ಅರಿಯುವ ಜಿಜ್ಞಾಸೆಯೂ ಈ ಹೊತ್ತಿನದಲ್ಲ. ದಿನದಿಂದ ದಿನಕ್ಕೂ ನಾನು ಹೆಚ್ಚು ಹೆಚ್ಚು ಒಬ್ಬನಾಗುತ್ತಿರುವುದು ಯಾವೊತ್ತಿನ ಸತ್ಯ. ಬಹುಶಃ ಎಲ್ಲರೂ ಹಾಗೆ ಇರಬಹುದು,” ಎಂದು ಅವರು ಪೋಸ್ಟ್ ಮಾಡಿದ್ದಾರೆ. ಅಲ್ಲದೆ, ತಮ್ಮ ಮದುವೆ ಸಂದರ್ಭದಲ್ಲಿ ಚೈತನ್ಯ ನಾರಾಯಣಸ್ವಾಮಿ ಇರುವ ಫೋಟೋವನ್ನು ಹಂಚಿಕೊಂಡಿದ್ದಾರೆ.