ಗುತ್ತಿಗೆದಾರರ ಬಾಕಿ ಹಣ ಬಿಡುಗಡೆ

ಚಿತ್ರದುರ್ಗ: ಬಿಜೆಪಿ ಸರ್ಕಾರದಲ್ಲಿ ಹಣ ಇಲ್ಲದಿದ್ದರೂ ಟೆಂಡರ್ ಮೂಲಕ 2 ಲಕ್ಷ ಕೋಟಿ ವೆಚ್ಚದ ಕಾಮಗಾರಿ ನೀಡಿದ್ದು ಬಹುದೊಡ್ಡ ತಪ್ಪು ಎಂದು ಸಚಿವ ಡಿ.ಸುಧಾಕರ್ ಹೇಳಿದರು. ನಗರದಲ್ಲಿ ಮಂಗಳವಾರ ಗುತ್ತಿಗೆದಾರ ಸಂಘದ ಸಮಾರಂಭ ಉದ್ಘಾಟಿಸಿ ಮಾತನಾಡಿ, ಬಿಜೆಪಿ ಸರ್ಕಾರ ಮಾಡಿದ ತಪ್ಪಿಗೆ ಗುತ್ತಿಗೆದಾರರು ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದರು. ಈ ಸಮಸ್ಯೆ ಪರಿಹಾರಕ್ಕೆ ಸಿದ್ದರಾಮಯ್ಯ ಸರ್ಕಾರ ಪ್ರಾಮಾಣಿಕ ಪ್ರಯತ್ನ ಮಾಡುತ್ತಿದೆ. ಸರ್ಕಾರ ತನ್ನ ಹೊಣೆಗಾರಿಕೆಯನ್ನು ಸಮರ್ಥವಾಗಿ ನಿರ್ವಹಿಸಲಿದ್ದು, ಹಂತ-ಹಂತವಾಗಿ ಈಗಾಗಲೇ ಗುತ್ತಿಗೆದಾರರಿಗೆ ಹಣ ಬಿಡುಗಡೆ ಮಾಡುತ್ತಿದೆ ಎಂದರು. ಚಿತ್ರದುರ್ಗದ ಆರ್.ಮಂಜುನಾಥ್ ಸಂಘದ ರಾಜ್ಯಾಧ್ಯಕ್ಷರಾಗಿದ್ದು, ಅವರ ಜತೆ ಚರ್ಚಿಸಿ ಗುತ್ತಿಗೆದಾರರ ಸಮಸ್ಯೆಗಳನ್ನು ಬಗೆಹರಿಸಲು ಸರ್ಕಾರ ಪ್ರಯತ್ನ ನಡೆಸಲಿದೆ ಎಂದರು.