ಗೋವಾದ ಲೈರಾವಿ ದೇವಿ ದೇವಸ್ಥಾನದಲ್ಲಿ ಕಾಲ್ತುಳಿತ ಸಂಭವಿಸಿ 6 ಭಕ್ತರು ಮೃತಪ್ಟಿದ್ದು, 15ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.
ಗೋವಾದ ಶ್ರೀಗಾಂವ್‌ನಲ್ಲಿರುವ ಲೈರಾವಿ ದೇವಸ್ಥಾನದ ವಾರ್ಷಿಕ ಜಾತ್ರೆಗೆ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಆಗಮಿಸಿದ್ದಾರೆ. ಈ ವೇಳೆ ನಿರ್ವಹಣೆ ವ್ಯವಸ್ಥೆಯಲ್ಲಿ ಸಮಸ್ಯೆ ಎದುರಾಗಿದೆ. ಪರಿಣಾಮ ಕಾಲ್ತುಳಿತ ಸಂಭವಿಸಿದೆ. ಈ ಘಟನೆಯಲ್ಲಿ 6 ಭಕ್ತರು ಸ್ಥಳದಲ್ಲೇ ಮೃತಪಟ್ಟಿದ್ದರೆ, ಅನೇಕ ಜನರು ಗಾಯಗೊಂಡಿದ್ದಾರೆ.
ಮೋದಿ ಸಂತಾಪ: ಇನ್ನು ಕಾಲ್ತುಳಿತದ ವರದಿ ಆಗುತ್ತಿದ್ದಂತೆ, ಪ್ರಧಾನಿ ನರೇಂದ್ರ ಮೋದಿ ಅವರು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿ ಸಂತಾಪ ಸೂಚಿಸಿದ್ದು ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಅವರಿಂದ ಮಾಹಿತಿ ಪಡೆದಿದ್ದಾರೆ. ಘಟನೆ ಬಗ್ಗೆ ಬೇಸರ ವ್ಯಕ್ತಪಡಿಸಿರುವ ಪ್ರಧಾನಿ, ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡವರಿಗೆ ಸಂತಾಪ ಸೂಚಿಸಿದ್ದಾರೆ. ಗಾಯಾಳುಗಳು ಬೇಗ ಗುಣಮುಖರಾಗಲಿ. ಸ್ಥಳೀಯ ಆಡಳಿತದಿಂದ ಅಗತ್ಯ ಸಹಾಯ ಮುಂದುವರೆಯಲಿದೆ ಎಂದಿದ್ದಾರೆ.