ಚಲಿಸುತ್ತಿದ್ದ ಕಾರಿನಲ್ಲಿ ಏಕಾಏಕಿ ಬೆಂಕಿ

ಗದಗ: ಚಲಿಸುತ್ತಿದ್ದ ಕಾರಿನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡು ಹೊತ್ತಿ ಉರಿದ ಘಟನೆ ನಡೆದಿದೆ.
ಗದಗನಿಂದ ಹನುಮಸಾಗರಕ್ಕೆ ಹೊರಟಿದ್ದ ಕಾರು ಚಲಿಸುತ್ತಿರುವ ವೇಳೆ ಈ ಘಟನೆ ನಡೆದಿದೆ ಈರಣ್ಣ ಜಾಲಿಹಾಳ ಹಾಗೂ ಅವರ ಕುಟುಂಬಸ್ಥರು ಕಾರ್‌ನಲ್ಲಿ ಗದಗನಿಂದ ಹನುಮಸಾಗರಕ್ಕೆ ಹೊರಟಿದ್ದರು. ಚಲಿಸುತ್ತಿರುವ ವೇಳೆ ಇಂಜಿನ್‌ನಲ್ಲಿ ಸ್ವಲ್ಪ ಹೊಗೆ ಕಾಣಿಸಿಕೊಂಡಿದೆ. ತಕ್ಷಣವೇ ಕಾರಿನಲ್ಲಿದ್ದವರು ಕೆಳಗೆ ಇಳಿದ್ದಿದ್ದಾರೆ. ಅದೃಷ್ಟವಶಾತ್ ಕಾರಿನಲ್ಲಿದ್ದ ಐವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ, ಇನ್ನು ಬೆಂಕಿಗೆ ಕಾರ್ ಸಂಪೂರ್ಣ ಸುಟ್ಟು ಭಸ್ಮವಾಗಿದ್ದು. ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾದರು. ಗದಗ ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.