ಬಜರಂಗದಳದ ಕಾರ್ಯಕರ್ತನ ವಶಕ್ಕೆ ಪಡೆದ ಪೊಲೀಸರು

ಚಿಕ್ಕಮಗಳೂರು: ಮಂಗಳೂರು ಕೊಳ್ತಮಜಲು ಅಬ್ದುಲ್ ರಹಿಮಾನ್ ಹತ್ಯಪ್ರಕರಣಕ್ಕೆ ಸಂಬಂಧಪಟ್ಟಂತೆ ಮಂಗಳೂರು ಪೊಲೀಸರು ಶೃಂಗೇರಿಯಲ್ಲಿ ಬಜರಂಗದಳದ ಕಾರ್ಯಕರ್ತ ರವಿ ಸಂಜಯ ಪೂಜಾರಿ ಎಂಬುವರನ್ನು ವಶಕ್ಕೆ ಪಡೆದಿದ್ದಾರೆ.
ರೆಹಿಮಾನ್ ಹತ್ಯೆ ಆರೋಪಿಗಳಿಗೆ ಸಹಾಯ ಮಾಡಿರುವ ಹಿನ್ನೆಲೆಯಲ್ಲಿ ಬುಧವಾರವೇ ರವಿ ಸಂಜಯ ಪೂಜಾರಿ ಅವರನ್ನು ಮಂಗಳೂರು ಪೊಲೀಸರು ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಿದ್ದಾರೆ.
ರಹಿಮಾನ್ ಹತ್ಯೆ ಆರೋಪಿಗಳು ಶೃಂಗೇರಿಗೆ ಆಗಮಿಸಿದಾಗ ಅವರಿಗೆ ಸಹಾಯ ಮಾಡಿದ ಹಿನ್ನೆಲೆಯಲ್ಲಿ ರವಿ ಸಂಜಯ ಪೂಜಾರಿ ಅವರನ್ನು ಬಂಧಿಸಲಾಗಿದೆ ಎನ್ನಲಾಗುತ್ತಿದೆ. ಈ ಸಂಬಂಧ ಬಂಟ್ವಾಳ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದ್ದು ಸೋಮವಾರ ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸುವ ಸಾಧ್ಯತೆ ಇದೆ.