Home News ಬಸ್-ಕಾರು ನಡುವೆ ಭೀಕರ ಅಪಘಾತ: ಇಬ್ಬರು ಸಾವು

ಬಸ್-ಕಾರು ನಡುವೆ ಭೀಕರ ಅಪಘಾತ: ಇಬ್ಬರು ಸಾವು

ಹಾವೇರಿ: ಜಿಲ್ಲೆಯ ರಾಣೇಬೆನ್ನೂರು ತಾಲೂಕಿನ ಕುಮಾರಪಟ್ಟಣಂ ಗ್ರಾಮದ ಬೈಪಾಸ್ ಬಳಿ ಸಾರಿಗೆ ಬಸ್‌ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಇಬ್ಬರು ಸಾವನ್ನಪ್ಪಿದ್ದು, ಓರ್ವ ಗಂಭೀರ ಗಾಯಗೊಂಡ ಘಟನೆ ನಡೆದಿದೆ.
ಘಟನೆಯಲ್ಲಿ ದಾವಣಗೆರೆ ಮೂಲದ ಪ್ರವೀಣ (36) ಸಾವನ್ನಪ್ಪಿದ್ದು, ಇನ್ನೊಬ್ಬರ ಗುರುತು ಪತ್ತೆಯಾಗಿಲ್ಲ. ಅಪಘಾತದಲ್ಲಿ ಗಂಭೀರ ಗಾಯಗೊಂಡ ಕೊಟ್ಟೇಶ ಅಬಲೂರನ್ನು ದಾವಣಗೆರೆ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸಾರಿಗೆ ಬಸ್ ಅಥಣಿಯಿಂದ ದಾವಣಗೆರೆಗೆ ಹೊರಟ್ಟಿದ್ದು, ಬೈಪಾಸ್‌ನಲ್ಲಿ ಮುಖಾಮುಖಿ ಡಿಕ್ಕಿಯಾಗಿ ದುರ್ಘಟನೆ ಸಂಭವಿಸಿದೆ. ಈ ಸಂಬಂಧ ಕುಮಾರಪಟ್ಟಣಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕಲಬುರಗಿ ಆವೃತ್ತಿ ರಜತ ಸಂಭ್ರಮ
Exit mobile version